April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೆ.22 ರಂದು ಸೋಣಂದೂರಿನಲ್ಲಿ ನಡೆದಿದೆ.

ಸೋಣಂದೂರು ಮುಂಡಾಡಿ ಮನೆ ನಿವಾಸಿಯಾಗಿರುವ ಪ್ರಶಾಂತ್ ಮೃತಪಟ್ಟ ಯುವಕ.

ಪ್ರಶಾಂತ್ ಸೆ.18 ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.ಕೂಡಲೇ ಮನೆಯವರು ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.
ಘಟನೆಯ ಬಗ್ಗೆ ಮೃತನ ಸಂಬಂಧಿಯಾಗಿರುವ ಪ್ರತೀಕ್ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya
error: Content is protected !!