30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸೆ.24 ರಂದು ಬೆಳಿಗ್ಗೆ 10.00 ಗಂಟೆಗೆ ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಬ್ಯಾಂಕ್ ಆಫ್ ಬರೋಡ ವಿಭಾಗೀಯ ಮುಖ್ಯಸ್ಥರು ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಗಾಯತ್ರಿ ಆರ್ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಜರ್ನಾದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯರವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಧನರಾಜ್ , ಉಜಿರೆ ಎಸ್.ಡಿ.ಎಂ ಸೊಸೈಟಿ ಐಟಿ ಮತ್ತು ಹಾಸ್ಟೆಲ್ ಗಳ ಸಿಇಒ ಪೂರಣ್ ವರ್ಮ, ಬೆಳ್ತಂಗಡಿ ವಕೀಲರಾದ ಬಿ.ಕೆ ಧನಂಜಯ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಸಂಚಾಲಕರಾದ ಕೆ.ಮೋಹನ್ ಕುಮಾರ್ ಹಾಗೂ ಬಿ.ರಾಜೇಶ್ ಪೈ ತಿಳಿಸಿದ್ದಾರೆ.

Related posts

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya
error: Content is protected !!