24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

ಬೆಳ್ತಂಗಡಿ: ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿವೆ.ಇಲ್ಲಿ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು,ಬಿದಿರು,ಗಾಳಿ,ಹೆಬ್ಬಲಸು, ಬಲಿಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು, ತುಳಿದು ಸಂಪೂರ್ಣ ಧ್ವoಸ ಮಾಡಿವೆ.ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಧರ್ಮಸ್ಥಳದ ನೇರ್ತನೆಯಲ್ಲಿ ಕಂಡುಬಂದಿದ್ದ ಕಾಡಾನೆಗಳು ಇಲ್ಲಿಯೂ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಕಳೆದ ವರ್ಷವೂ ಈ ನರ್ಸರಿಗೆ ಕಾಡಾನೆಗಳು ದಾಳಿ ಇಟ್ಟು ಸಾವಿರಾರು ಗಿಡ ಹಾಗೂ ನರ್ಸರಿ ಸೊತ್ತುಗಳಿಗೆ ಹಾನಿ ಉಂಟುಮಾಡಿದ್ದವು‌ ‌ಅರಣ್ಯ ಇಲಾಖೆಯ ಈ ನರ್ಸರಿ ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 20ಮೀ.ಅಂತರದಲ್ಲಿದೆ. ಆನೆಗಳು ಹೆದ್ದಾರಿ ಬದಿಯು ಸುಳಿದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ.

ಕಳೆದ ಸುಮಾರು ಹದಿನೈದು ದಿನಗಳಿಂದ ತಾಲೂಕಿನ ಒಂದಲ್ಲ ಒಂದು ಕಡೆ ಕಾಡಾನೆಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ.ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಸಿಬ್ಬಂದಿ ಸದಾನಂದ, ಉಮೇಶ್ ನರ್ಸರಿ ವಾಚರ್ ಭೇಟಿ ನೀಡಿ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ಗೆ ಮಾಹಿತಿ ನೀಡಿದ್ದಾರೆ.

Related posts

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!