April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಸೆ.24 ರಂದು ನಡೆಯಿತು.

ಸಭೆಯಲ್ಲಿ ಮಾತನಾಡಿದ ದಸಂಸ ಮುಖಂಡ ವೆಂಕಣ್ಣ ಕೊಯ್ಯುರುರವರು ದಲಿತ ಕಾಲನಿ ಸಮೀಪ ಅಂಗಡಿಗಳಲ್ಲಿ ಯಥೇಚ್ಛವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಮೌನವಾಗಿದೆ. ಇದರಿಂದಾಗಿ ದಿನನಿತ್ಯ ದಲಿತ ಕಾಲನಿಗಳಲ್ಲಿ ಗಲಾಟೆ ನಡೆಯುತ್ತದೆ ಎಂದು ದೂರಿದ ಅವರು ಇಲಾಖೆಗಳು ದಾಳಿ ನಡೆಸುವ ಮೊದಲೇ ಅಕ್ರಮ ದಂಧೆಕೋರರಿಗೆ ಮಾಹಿತಿ ನೀಡುವ ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಈ ಬಗ್ಗೆ ಪೂರಕವಾಗಿ ಮಾತನಾಡಿದ ದಲಿತ ಮುಖಂಡರುಗಳು ಅಕ್ರಮ ದಂಧೆಕೋರರ ಬಗ್ಗೆ ಧ್ವನಿ ಎತ್ತುವವರ ಮಾಹಿತಿಯನ್ನು ಬಹಿರಂಗ ಪಡಿಸುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ರವರು ದಲಿತ ಕಾಲನಿ ಸೇರಿದಂತೆ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೀಟ್ ಪೋಲಿಸರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ , ಇದರಿಂದಾಗಿ ಆಗಾಗ ಸಮಸ್ಯೆ ಉದ್ಭವಿಸುತ್ತದೆ. ಬೀಟ್ ಪೋಲಿಸರಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಮುಖಂಡರಾದ ಸಂಜೀವ ಆರ್ , ರಮೇಶ್ ಆರ್ , ಶೇಖರ್ ಲಾಯಿಲ ಆರೋಪಿಸಿದರು. ದಲಿತ ಕಾಲನಿಗಳ ಸಮೀಪ ಅಪರಿಚಿತರು ಹೆಣ್ಣು ಮಕ್ಕಳನ್ನು ಚುಡಾಯಿಸುವ ಗಂಭೀರ ಸ್ವರೂಪದ ಸಮಸ್ಯೆಗಳ ಬಗ್ಗೆ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಪ್ರಯೋಜನವಿಲ್ಲ ಎಂದು ಬಿ.ಕೆ ವಸಂತ ಆರೋಪಿಸಿದರು. ಈ ಬಗ್ಗೆ ಮಾತನಾಡಿದ ನಾಗೇಶ್ ಕದ್ರಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರರವರು ಮುಂದಿನ ದಿನಗಳಲ್ಲಿ ದಲಿತ ಕಾಲನಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

Related posts

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ