April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿದ ಕುಟುಂಬದ ಸದಸ್ಯರಿಗೆ ಡಬ್ಲ್ಯೂಸಿ ಎಸ್ ಸಂಸ್ಥೆ ಬೆಂಗಳೂರು, ಇವರ ವತಿಯಿಂದ ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳ ಬಗ್ಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಕುತ್ಲೂರು ಮಂಜುಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಿ ಎಲ್ಲರೂ ಈ ತರಬೇತಿಯ ಸದುಪಯೋಗ ಪಡೆದು ಜೇನು ಕೃಷಿ ಮಾಡುವಂತೆ ತಿಳಿಸಿದರು. ತೋಟಗಾರಿಕಾ ಇಲಾಖೆಯ ನಿರ್ದೇಶಕರಾದ ಮಹಾವೀರ್ ಮತ್ತು ಅಶ್ವಿನ್ ರವರು ಜೇನು ಕೃಷಿ ಬಗ್ಗೆ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯವರಾದ ಹೇಮಚಂದ್ರ ರವರು ಯೋಜನೆಗಳ ಬಗ್ಗೆ ತಿಳಿಸಿದರು. ಜೇನು ಕೃಷಿಯಲ್ಲಿ ಪ್ರಗತಿಪರ ಕೃಷಿಕರಾದ ಆಲಡ್ಕ ಶ್ಯಾಮಸುಂದರ್ ಭಟ್ ಮಾಹಿತಿ ನೀಡಿ ಅವರ ತೋಟದಲ್ಲಿ ಜೇನು ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಪ್ರಗತಿಪರ ಕೃಷಿಕರಾದ ಪ್ರಕಾಶ್ ಜೋಷಿ ಸುಲ್ಕೇರಿ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸದಾನಂದ ಗೌಡ, ನಿರ್ದೇಶಕರಾದ ಲಿಂಗಪ್ಪ ಎಮ್.ಕೆ, ನಾರಾವಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಸದಸ್ಯರಾದ ಶ್ರೀಮತಿ ಮೀನಾ, ಇಕೋ ಫ್ರೆಶ್ ಎಂಟರ್ ಪ್ರೈಸಸ್ ಮಾಲಕರಾದ ರಾಕೇಶ್ ಹೆಗ್ಡೆ ಉಪಸ್ಥಿತರಿದ್ದರು.

ಡಬ್ಲ್ಯೂಸಿ ಎಸ್ ಸಂಸ್ಥೆಯ ಅಧಿಕಾರಿ, ಸಮಾಜ ಸೇವಕರಾದ ರಾಮಚಂದ್ರ ಭಟ್ ಕುಕ್ಕುಜೆ, ಡಬ್ಲ್ಯೂಸಿ ಎಸ್ ಸಂಸ್ಥೆಯಿಂದ ಈ ವರ್ಷ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗ ಪಡೆದು ಮಾದರಿ ಜೀವನ ನಡೆಸುವಂತೆ ಕರೆ ನೀಡಿ, ಸ್ವಾಗತಿಸಿ, ಧನ್ಯವಾದವಿತ್ತರು.

ಕುತ್ಲೂರು ಸ.ಉ.ಪ್ರಾ.ಶಾಲೆಯ ಮಕ್ಕಳ ಪ್ರಾರ್ಥಿಸಿದರು. ಸುಮಾರು 70 ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!