30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

ಕೊಯ್ಯೂರು : ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು ಇಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಕರ್ತವ್ಯ ಸಲ್ಲಿಸಿ ಇತ್ತೀಚಿಗೆ ವರ್ಗಾವಣೆಗೊಂಡ ಬಾಲಕೃಷ್ಣ ಬೇರಿಕೆಯವರ ಬೀಳ್ಕೊಡುಗೆ ಸಮಾರಂಭವು ನಡೆಯಿತು.


ಅಭಿನಂದನಾ ಭಾಷಣ ಮಾಡಿದ ಕೊಯ್ಯೂರು ಪ್ಯಾಕ್ಸ್ ನ ನಿರ್ದೇಶಕರಾದ ಅಶೋಕ್ ಕುಮಾರ್ ಅಗ್ರಸಾಲೆ ಯವರು, ಬಾಲಕೃಷ್ಣ ಬೇರಿಕೆ ಯವರ ಮಾದರಿ ವ್ಯಕ್ತಿತ್ವ, ನಯ -ವಿನಯ, ನಾಯಕತ್ವ ಗುಣ, ಶಿಸ್ತು, ಉತ್ತಮ ಆಡಳಿತ, ಸಂಸ್ಥೆಯ ಪ್ರಗತಿಯ ಬಗ್ಗೆ ದೃಷ್ಟಿ ಕೋನ -ಇವುಗಳ ಬಗ್ಗೆ ಕೊಂಡಾಡಿದರು. ಕಾಲೇಜು ವಿದ್ಯಾರ್ಥಿ ವೃಂದ, ಹಳೆ ವಿದ್ಯಾರ್ಥಿಗಳು, ಕೊಯ್ಯೂರು ಗ್ರಾಮಪಂಚಾಯತ್ ವತಿಯಿಂದಲೂ ಶ್ರೀಯುತರನ್ನು ಸನ್ಮಾನಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲರಾದ ಮೋಹನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ದಾಮೋದರ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಯಾಮಣಿ, ಉಪಾಧ್ಯಕ್ಷ ಹರೀಶ್ ಬಜಿಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಕೊಯ್ಯೂರು ಪ್ಯಾಕ್ಸ್ ಅಧ್ಯಕ್ಷ ನವೀನ್ ವಾದ್ಯಕೋಡಿ, ಕಾರ್ಯನಿರ್ವಾಹಣಾಧಿಕಾರಿ ಅನಂತಕೃಷ್ಣ ಭಟ್, ಕೊಯ್ಯೂರು ಪ್ರೌಢ ಶಾಲಾ ಮುಖ್ಯ ಗುರುಗಳಾದ ರಾಧಾಕೃಷ್ಣ ತಚ್ಚಮೆ ಯವರು ಭಾಗವಹಿಸಿದ್ದರು.

ಗ್ರಾಮ ಪಂಚಾಯತ್ ಸ್ಥಳೀಯ ಸದಸ್ಯರಾದ ಲೋಕೇಶ್ ಗೌಡ, ಲತೀಫ್, ಶ್ರೀಮತಿ ಹೇಮಾವತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಛೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಶ್ರೀಮತಿ ಜಯಶ್ರೀ ಯವರನ್ನು ಸನ್ಮಾನಿಸಲಾಯಿತು.


ವಿದ್ಯಾರ್ಥಿನಿಯರಾದ ಹಯಫಾತಿಮಾ, ಮೇಘಶ್ರೀ, ರಂಝಿನ, ಭವ್ಯ, ಪವನ್ಯ ರವರು ಪ್ರಾರ್ಥನೆ ಗೈದರು. ವಿದ್ಯಾರ್ಥಿನಿಯರಾದ ಆಯಿಷಾತ್ ರಾಬಿಹಾ ಮತ್ತು ರಂಝಿನ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಕನ್ನಡ ಉಪನ್ಯಾಸಕಿ ಶ್ರೀಮತಿ ರಶ್ಮಿದೇವಿ ಪ್ರಸ್ತಾವನೆ ಗೈದು ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪ ಡಿ. ಸನ್ಮಾನ ಪತ್ರ ವಾಚಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ತೃಪ್ತಿ ಯವರು ಧನ್ಯವಾದ ಸಮರ್ಪಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರುಗಳಾದ ಶ್ರೀಮತಿ ಭವ್ಯ ಮತ್ತು ಶ್ರೀಮತಿ ಪ್ರೀತಿ, ಸಮಾಜ ಶಾಸ್ತ್ರ ಉಪನ್ಯಾಸಕ ಮಾಯಿಲ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya
error: Content is protected !!