27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಸೆ.24 ರಂದು ನಡೆಯಿತು.

ಸಭೆಯಲ್ಲಿ ಮಾತನಾಡಿದ ದಸಂಸ ಮುಖಂಡ ವೆಂಕಣ್ಣ ಕೊಯ್ಯುರುರವರು ದಲಿತ ಕಾಲನಿ ಸಮೀಪ ಅಂಗಡಿಗಳಲ್ಲಿ ಯಥೇಚ್ಛವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಮೌನವಾಗಿದೆ. ಇದರಿಂದಾಗಿ ದಿನನಿತ್ಯ ದಲಿತ ಕಾಲನಿಗಳಲ್ಲಿ ಗಲಾಟೆ ನಡೆಯುತ್ತದೆ ಎಂದು ದೂರಿದ ಅವರು ಇಲಾಖೆಗಳು ದಾಳಿ ನಡೆಸುವ ಮೊದಲೇ ಅಕ್ರಮ ದಂಧೆಕೋರರಿಗೆ ಮಾಹಿತಿ ನೀಡುವ ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಈ ಬಗ್ಗೆ ಪೂರಕವಾಗಿ ಮಾತನಾಡಿದ ದಲಿತ ಮುಖಂಡರುಗಳು ಅಕ್ರಮ ದಂಧೆಕೋರರ ಬಗ್ಗೆ ಧ್ವನಿ ಎತ್ತುವವರ ಮಾಹಿತಿಯನ್ನು ಬಹಿರಂಗ ಪಡಿಸುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ರವರು ದಲಿತ ಕಾಲನಿ ಸೇರಿದಂತೆ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೀಟ್ ಪೋಲಿಸರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ , ಇದರಿಂದಾಗಿ ಆಗಾಗ ಸಮಸ್ಯೆ ಉದ್ಭವಿಸುತ್ತದೆ. ಬೀಟ್ ಪೋಲಿಸರಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಮುಖಂಡರಾದ ಸಂಜೀವ ಆರ್ , ರಮೇಶ್ ಆರ್ , ಶೇಖರ್ ಲಾಯಿಲ ಆರೋಪಿಸಿದರು. ದಲಿತ ಕಾಲನಿಗಳ ಸಮೀಪ ಅಪರಿಚಿತರು ಹೆಣ್ಣು ಮಕ್ಕಳನ್ನು ಚುಡಾಯಿಸುವ ಗಂಭೀರ ಸ್ವರೂಪದ ಸಮಸ್ಯೆಗಳ ಬಗ್ಗೆ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಪ್ರಯೋಜನವಿಲ್ಲ ಎಂದು ಬಿ.ಕೆ ವಸಂತ ಆರೋಪಿಸಿದರು. ಈ ಬಗ್ಗೆ ಮಾತನಾಡಿದ ನಾಗೇಶ್ ಕದ್ರಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರರವರು ಮುಂದಿನ ದಿನಗಳಲ್ಲಿ ದಲಿತ ಕಾಲನಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya
error: Content is protected !!