ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ : ಕೆ.ಪಿ.ಎಸ್. ಪುಂಜಾಲಕಟ್ಟೆ ಇಲ್ಲಿನ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ಅಖಿಲ ಕರ್ನಾಟಕ ಜನ ಜಾಗೃತಿ ಘಟಕ ಮಡಂತ್ಯಾರು ವಲಯದ ಸಹಯೋಗದಲ್ಲಿ ಸ್ವಾಸ್ತ್ಯ ಸಂಕಲ್ಪ ಎಂಬ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ ಸೆ.23ರಂದು ನೆರವೇರಿತು.

ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸಂಟ್ ಪಾಯ್ಸ್ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸೇವನೆ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ವಲಯ ಅಧ್ಯಕ್ಷರು ಪದ್ಮನಾಭ ಸಾಲಿಯಾನ್, ಮೇಲ್ವಿಚಾರಕರು ವಸಂತ ಕುಮಾರ್, ಸದಸ್ಯರಾದ ರೋಹಿಣಿ, ಭಾರತಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕಿ ವಂದಿಸಿದರು.

Leave a Comment

error: Content is protected !!