29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇದರ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಹಾಗೂ ಹಿತ ಚಿಂತಕರ ಸಭೆಯು ಬಳಂಜ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಹಲವಾರು ಶಾಶ್ವತ ಯೋಜ‌ನೆಗಳನ್ನು ಮಾಡಬೇಕೆಂಬ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು.ವಿಶೇಷವಾಗಿ ಪ್ರತಿ ತಿಂಗಳಲ್ಲಿ ಯಾವುದಾದರೊಂದು ಕಾರ್ಯಕ್ರಮಗಳನ್ನು ಮಾಡುವ ಬಗ್ಗೆ ಕ್ರಮ‌ಕೈಗೊಳ್ಳಲಾಯಿತು.

ಅಮೃತ ಮಹೋತ್ಸವ ಕಾರ್ಯಕ್ರಮ 2024 ರ ಡಿಸೆಂಬರ್ ತಿಂಗಳ ಮೊದಲು ನಡೆಯಲಿದ್ದು ಮೊದಲಾಗಿ ಕೋರ್ ಕಮಿಟಿ ಮಾಡಲಾಯಿತು. ಹಾಗೂ ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ.ಕೆ ಅವರನ್ನು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಊರಿನ‌ ಗಣ್ಯರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕ,ಹೆಚ್.ಧರ್ಣಪ್ಪ ಪೂಜಾರಿ,ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್,ಪತ್ರಕರ್ತ ಮನೋಹರ್ ಬಳಂಜ,ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ಪೂಜಾರಿ,ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಸುಲೋಚನ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ವಿಲ್ಪ್ರೇಡ್ ಪಿಂಟೋ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕ ಮಲ್ಲಿಕಾರ್ಜುನ ಸ್ವಾಗತಿಸಿದರು. ಹಳೆ ವಿದ್ಯಾರ್ಥಿಗಳು, ಊರವರು ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಸಲಹೆ ನೀಡಿದರು.

Related posts

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya
error: Content is protected !!