23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

ಉಜಿರೆ: ಗ್ರಾಮ ಪಂಚಾಯತ್ ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಹಿತಿ ಕಾರ್ಯಾಗಾರ, ಗ್ರಾಮ ಆರೋಗ್ಯ ಅಭಿಯಾನದಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಇದರ ಸಹಭಾಗೀತ್ವದಲ್ಲಿ ಜೇನು ಕೃಷಿ, ಇಲಾಖೆಯ ವಿವಿಧ ಯೋಜನೆಗಳು, ಬೆಳೆ ವಿಮೆ ಮತ್ತು ಪೌಷ್ಟಿಕ ತೋಟದ ಕುರಿತು ರೈತರಿಗೆ ತರಬೇತಿ ಕಾರ್ಯಾಗಾರ ಸೆ.26 ರಂದು ಉಜಿರೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾ ಭವನದಲ್ಲಿ ಜರಗಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಎ.ಕೆ. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್. ಚಂದ್ರಶೇಖರ್, ಸಹಕಾರ ಅಭಿವೃದ್ಧಿ ಅಧಿಕಾರಿಯಾದ ಪ್ರತಿಮಾ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ, ಕೃಷಿ ಅಧಿಕಾರಿ ಚಿದಾನಂದ ಹೂಗಾರ್, ರಾಜ್ಯ ಮಟ್ಟದ ಜೇನು ಕೃಷಿ ತರಬೇತಿದಾರ ರಾಧಾಕೃಷ್ಣ ಕೋಡಿ, ರೋಟರಿ ಕ್ಲಬ್ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಗ್ರಾಮ ಪಂಚಾಯತ್ ಸದಸ್ಯರು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಚ್ಛತಾ ಹೀ ಸೇವಾ ಆಂದೋಲನದ ಮೂಲಕ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ನಾಗರೀಕರು, ವರ್ತಕರು ಸಹಕಾರ ನೀಡಿ ಪ್ರೋತ್ಸಾಹಿಸಬೇಕು ಎಂದರು.

ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಹಿತಿ ಇರುವ ಕರಪತ್ರಗಳನ್ನು ಕಾರ್ಯಕ್ರಮದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಬಿಡುಗಡೆಗೊಳಿಸಲಾಯಿತು.
ಗ್ರಾಮ ಆರೋಗ್ಯ ಅಭಿಯಾನದ ಅಡಿ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣ ಶಿಬಿರ, ವಿವಿಧ ಕೃಷಿ, ತೋಟಗಾರಿಕೆ, ಇಲಾಖೆಯ ಮಾಹಿತಿಯನ್ನು ನೀಡಿದರು. ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್ ನಿರೂಪಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya
error: Content is protected !!