26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟವು ಜರಗಿತು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಜೆರಾಲ್ಡ್ ಮೋರಸ್ ಪಂದ್ಯಾಟವನ್ನು ಉದ್ಘಾಟಿಸಿದರು. ಶಿಕ್ಷಣ ಜ್ಞಾನವನ್ನು ನೀಡಿದರೆ ಕ್ರೀಡೆ ಬುದ್ಧಿ , ಜ್ಞಾನದ ಜೊತೆಗೆ ಸಂಯಮ, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ನೀಡುತ್ತದೆ ಎಂದು ಅವರು ಹೇಳಿದರು.


ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಸಂಚಾಲಕರಾದ ವಂ| ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಎರಡನ್ನು ಸ್ವೀಕರಿಸುವ ಮನೋಭಾವವನ್ನು ಕ್ರೀಡಾ ಪಟುಗಳು ಬೆಳೆಸಿಕೊಳ್ಳಬೇಕು. ತಾಲೂಕು ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಪಟುಗಳು ಸಾಧನೆ ಮಾಡುವಂತಾಗಲೆಂದು ಅವರು ಶುಭಹಾರೈಸಿದರು.


ಕಾಲೇಜಿನ ಪ್ರಾಂಶುಪಾಲರಾದ ವಂ| ಜೆರೋಮ್ ಡಿಸೋಜ ಸ್ವಾಗತಿಸಿ, ಉಪನ್ಯಾಸಕರಾದ ವಸಂತ್ ಶೆಟ್ಟಿ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
ಫಲಿತಾಂಶ: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರು ಪ್ರಥಮ ಸ್ಥಾನ ಹಾಗೂ ಎಸ್.ಡಿ.ಎಂ ರೆಸಿಡೆನ್ಶಿಯಲ್ ಪಿಯು ಕಾಲೇಜು ಉಜಿರೆ ದ್ವಿತೀಯ ಸ್ಥಾನ ಪಡೆಯಿತು. ಉತ್ತಮ ಆಟಗಾರನಾಗಿ ಜೊಹನ್ ಡಿಸೋಜ, ಮಹಮ್ಮದ್ ಅಷ್ಫಕ್ ಉತ್ತಮ ಗೋಲ್ಕೀಪರ್ ಹಾಗೂ ಉತ್ತಮ ಸ್ಟ್ರೈಕರ್ ಆಗಿ ಧನುಷ್ ಪ್ರಶಸ್ತಿ ಪಡೆದರು. ಸಮಾರೋಪ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೋಮ್ ಡಿಸೋಜ ಬಹುಮಾನ ವಿತರಿಸಿದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಹಾಗೂ ಸಂಜಿತ್ ಕುಮಾರ್ ಶೆಟ್ಟಿ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ|ಪ್ರಕಾಶ್ ಡಿಸೋಜ ಪಂದ್ಯಾಟ ಯಶಸ್ಸಿಗೆ ಸಹಕರಿಸಿದರು.

Related posts

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!