ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ನ ಘಟಕದಿಂದ ಪ್ರಥಮ ಚಿಕಿತ್ಸಾ ಹಾಗೂ ಸೈಬರ್ ಕ್ರೈಂನ ಕುರಿತು ಮಾಹಿತಿ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ರೆಡ್ ಕ್ರಾಸ್ ಘಟಕದ ನಿರ್ದೇಶಕರಾದ ಉಪನ್ಯಾಸಕ ಸೂರಜ್ ಚಾರ್ಲ್ಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇಂಡಿಯನ್ ರೆಡ್ ಕ್ರಾಸ್ ಘಟಕ ದಕ್ಷಿಣ ಕನ್ನಡ ಇದರ ಸಂಪನ್ಮೂಲ ವ್ಯಕ್ತಿ ಹಾಗೂ ತರಬೇತುದಾರ ಅಶ್ವಿನ್ ಕುಮಾರ್ ಎಂ ಸಂಪನ್ಮೂಲ ವ್ಯಕ್ತಿಯಾಗಿ ಪ್ರಥಮ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಸ್ವಾವಲಂಬಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಪರೋಪಕಾರ, ಸೌಹಾರ್ದಯುತ ಜೀವನ, ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.


ಆಕಸ್ಮಿಕ ದುರ್ಘಟನೆಗಳ ಸಂದರ್ಭ ಅನಾರೋಗ್ಯ ಪೀಡಿತರಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ಅಣಕು ಪ್ರದರ್ಶನದ ಮೂಲಕ ಮಾಹಿತಿಯನ್ನು ನೀಡಿದರು.
ಸೈಬರ್ ಅಪರಾಧದ ಕುರಿತು ಐಕ್ಯೂ ಡಾಟ್ ನೆಟ್ ಪ್ರೈವೇಟ್ ಲಿಮಿಟೆಡ್ ನ ಸಿ.ಇ.ಒ ಮೊಹಮ್ಮದ್ ಶೇಕ್ ನಿಹಾಲ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ವಿಜ್ಞಾನ ತಂತ್ರಜ್ಞಾನದ ಈ ಕಾಲ ಘಟ್ಟದಲ್ಲಿ ನಡೆಯುತ್ತಿರುವ ಸೈಬರ್ ಅಪರಾಧದ ಬಗ್ಗೆ ಮಾಹಿತಿ ನೀಡಿದರು.


ಉಪನ್ಯಾಸಕ ವಸಂತ್ ಶೆಟ್ಟಿ ಸ್ವಾಗತಿಸಿದರು. ರೆಡ್ ಕ್ರಾಸ್ ಘಟಕದ ಅಧ್ಯಕ್ಷೆ ಅಫ್ರೀನ್ ತಾಜ್ ವಂದಿಸಿದರು. ರೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!