24.2 C
ಪುತ್ತೂರು, ಬೆಳ್ತಂಗಡಿ
May 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂಪಾಯಿ ಎರಡು ಲಕ್ಷ ಸಹಾಯಧನವನ್ನು ಸೆ.26 ರಂದು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿಯಾದ ದಯಾನಂದ್ ಪೂಜಾರಿ ಮತ್ತು ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಅಚ್ಚುತರವರು ಮಂದಿರದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರಿಗೆ ಸಹಾಯಧನದ ಮುಂಗಡ ರಶೀದಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಣಂದೂರು ಒಕ್ಕೂಟದ ಅಧ್ಯಕ್ಷರಾದ ಸತೀಶ್ ಆಚಾರ್ಯ ಹಾಗೂ ಕೃಷ್ಣಪ್ಪ ಮೂಲ್ಯ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕರಾದ ಹರೀಶ್ ಪೂಜಾರಿ, ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ರೋಹಿತ್ ಮತ್ತು ಸೋಣಂದೂರು ವಲಯದ ಸೇವಾ ಪ್ರತಿನಿಧಿಯಾದ ಆನಂದ ಪೂಜಾರಿ ಮತ್ತು ಶ್ರೀಮತಿ ಪುಷ್ಪ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಸಮಿತಿಯ ಸದಸ್ಯರಾದ ಹರೀಶ್ ಮೂಲ್ಯ ಶ್ರೀಧರ ವಡ್ಡ ಉಪಸ್ಥಿತರಿದ್ದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya
error: Content is protected !!