September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

ಬೆಳ್ತಂಗಡಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ ಕಾರ್ಯಕ್ರಮ ಸೆ.26 ರಂದು ಶ್ರಮಿಕ ಶಾಸಕರ ಕಾರ್ಯಾಲಯದಲ್ಲಿ ಜರುಗಿತು.

ಶಾಸಕ ಹರೀಶ್ ಪೂಂಜ ಅವರು ತಾಲೂಕಿನ ಆಯ್ದ ಯುವಕ-ಯುವತಿ ಮಂಡಲಗಳಾದ ಜೈರಾಮ್ ಗೆಳೆಯರ ಬಳಗ ಬಂದಾರು. ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಓಡಿಲ್ನಾಳ, ಅರುಣೋದಯ ಯುವಕ ಮಂಡಲ ಮರೋಡಿ, ಕೀರ್ತನಾ ಕಲಾ ತಂಡ ಮುಂಡಾಜೆ, ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಮತ್ತು ಪ್ರಗತಿ ಮಹಿಳಾ ಮಂಡಲ ಉಜಿರೆ ಇವರಿಗೆ ಕ್ರೀಡಾ ಕಿಟ್‌ಗಳನ್ನು ವಿತರಿಸಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳೆಂಜ, ಯುವಜನ ಒಕ್ಕೂಟದ ಜಿಲ್ಲಾ ನಿರ್ದೇಶಕ ಚಿದಾನಂದ ಇಡ್ಯ, ಮಿತ್ತಬಾಗಿಲು ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ, ಬಂದಾರು ಗ್ರಾ.ಪಂ ಮಾಜಿ ಅಧ್ಯಕ್ಷ ಉದಯ ಬಿ.ಕೆ, ಅಳದಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಪಸ್ಥಿತರಿದ್ದರು.

ಸಂಯೋಜಕ ಶಾಂತಪ್ಪ ಕಲ್ಮಂಜ ಸ್ವಾಗತಿಸಿದರು. ಸ್ಮಿತೇಶ್ ಎಸ್. ಬಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ಬಂಟರ ವಲಯ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya
error: Content is protected !!