24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ ಬೆಳ್ತಂಗಡಿ ಎಸ್.ಡಿ.ಎಂ ಹಾಲ್ ನ ಪಿನಾಕಿ ಸಭಾಭವದಲ್ಲಿ ಸೆ.25 ರಂದು ನಡೆಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ ಮಾತನಾಡಿ, 10 ವರ್ಷಗಳ ಹಿಂದೆ ವಿಶ್ವ ಮಟ್ಟದಲ್ಲಿ ಕೊನೆಯ ಸಾಲಿನಲ್ಲಿದ್ದ ಭಾರತ ಇಂದು ಮೊದಲ ಸಾಲಿನಲ್ಲಿ ನಿಲ್ಲುವಂತಹ ಗೌರವವನ್ನು ಭಾರತಕ್ಕೆ ತಂದುಕೊಟ್ಟದ್ದು ಬಿಜೆಪಿ ನೇತ್ರತ್ವದ ಸರ್ಕಾರ ಪ್ರಧಾನಿಗಳಾದ ನರೇಂದ್ರ ಮೋದಿಯವರು. ಅವರ ಆಡಳಿತದಿಂದ ಇಂದು ಯಾವೂದೇ ಅಂತರಾಷ್ಟ್ರೀಯ ಒಪ್ಪಂದಗಳು ಅದು ಭಾರತದ ತೀರ್ಮಾನದ ಮೇಲೆ ನಡೆಯುವಂತಾಗಿದೆ. ಅದಕ್ಕೆ ಬಿಜೆಪಿ ನೇತೃತ್ವದ ಸರಕಾರ ಕಾರಣವಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆ ಎಂದರು.


ಸಮಾರೋಪ ಮಾತುಗಳನ್ನಾಡಿದ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬದ್ದತೆಯೇ ಬಿಜೆಪಿ ಕಾರ್ಯಕರ್ತರ ಧ್ಯೇಯ. ನಾವು ಬದ್ದತೆಯಿಂದ ನಮ್ಮ ಕೆಲಸವನ್ನು ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿಯಾಗುವಲ್ಲಿ ಕೆಲಸವನ್ನು ಮಾಡಬೇಕಿದೆ ಎಂದರು.


ಮತದಾರರ ಚೇತನ ಅಭಿಯಾನದ ಜಿಲ್ಲಾ ಸಂಚಾಲಕ ದೇವದಾಸ್ ಶೆಟ್ಟಿ ಬಂಟ್ವಾಳ ಮತದಾರರ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ‌ಜನಾರ್ದನ್, ಉಪಸ್ಥಿತರಿದ್ದರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು. ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್. ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya
error: Content is protected !!