April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 73ನೇ ತಿದ್ದುಪಡಿಯ ಮೂಲಕ ಅಧಿಕಾರ ವಿಕೇಂದ್ರೀಕರಣದ ಕ್ರಾಂತಿಕಾರಕ ಪಂಚಾಯತ್ ರಾಜ್ ಕಾಯ್ದೆ ಜಾರಿಗೆ ತಂದು ದೇಶದ ಕಟ್ಟ ಕಡೆಯ ಪ್ರಜೆಯ ಕೈಗೂ ಅಧಿಕಾರ ನೀಡಿದರು. ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಅಥವಾ ಸ್ಥಳೀಯ ಸರ್ಕಾರದ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’.ವ್ಯವಸ್ಥೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.

ಅವರು ಸೆ.27 ರಂದು ಜಿಲ್ಲಾ ಕಾಂಗ್ರೆಸ್ ಸಮಿತಿ ,ದಕ್ಷಿಣ ಕನ್ನಡ ,ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದಕ್ಷಿಣ ಕನ್ನಡ ಇವರ ಆಶ್ರಯದಲ್ಲಿ ಮಂಗಳೂರಿನಲ್ಲಿ ಅ 03 ರಂದು ಮಂಗಳೂರಿನಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶದ ಬಗ್ಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸಭಾಂಗಣದಲ್ಲಿ ನಡೆದ ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶದ ಬಗ್ಗೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ವಸಂತ ಬಂಗೇರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪದವಿ ಮತ್ತು ಶಿಕ್ಷಕರ ಘಟಕದ ಅಧ್ಯಕ್ಷರಾದ ಉಲ್ಲಾಸ್ ಕೋಟ್ಯಾನ್ , ಬೆಳ್ತಂಗಡಿ ಉಬಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ನ,ಕೆ.ಎಮ್ ನಾಗೇಶ್ ಕುಮಾರ್ ಗೌಡ ,ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ ಶಾಹುಲ್ ಹಮೀದ್ , ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೆಡಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಮ್ ಎಸ್ ಮಹಮ್ಮದ್ ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ನಮಿತ ಪೂಜಾರಿ , ಕೆಪಿಸಿಸಿ ಸದಸ್ಯ ಕೇಶವ ಪಿ ಬೆಳಾಲು,ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ,ಪ್ರವೀಣ್ ಹಳ್ಳಿಮನೆ ಉಜಿರೆ ,ಮತ್ತು ಗ್ರಾಮ ಪಂಚಾಯತ್ ಉಪಸ್ಥಿತರಿದ್ದರು.

ಬೆಳ್ತಂಗಡಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ನಗರ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ವೇಗಸ್ ಸ್ವಾಗತಿಸಿ.ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನ ಬಂಡಾರಿ ವಂದಿಸಿದರು.
ಬೆಳ್ತಂಗಡಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಜೋಸೆಫ್ ಕೆ.ಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!