April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸಾಧಕರು

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

ಬೆಳ್ತಂಗಡಿ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2022-23ನೇ ಸಾಲಿನ ಪ್ರತಿಷ್ಠಿತ `ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಬಳಂಜ ಗ್ರಾಮ ಪಂಚಾಯತು ಆಯ್ಕೆಯಾಗಿದೆ.

ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಅ.2 ಗಾಂಧಿ ಜಯಂತಿಯಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಬಳಂಜ ಗ್ರಾಮ ಪಂಚಾಯತ್ ದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಪುರಸ್ಕಾರದಲ್ಲಿ ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಮತ್ತು ರೂ.5 ಲಕ್ಷಗಳ ನಗದು ಬಹುಮಾನವನ್ನು ಒಳಗೊಂಡಿರುತ್ತದೆ.

ಬಳಂಜ ಗ್ರಾಮ ಪಂಚಾಯತು ತಾಲೂಕಿನ ಉತ್ತಮ ಗ್ರಾಮ ಪಂಚಾಯತುಗಳಲ್ಲಿ ಒಂದಾಗಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗೆ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಪಂಚಾಯತು ವತಿಯಿಂದ 1.30 ಎಕ್ರೆ ಪ್ರದೇಶದಲ್ಲಿ 620 ಅಡಿಕೆ ಗಿಡಗಳನ್ನು ನೆಟ್ಟು ಪಂಚಾಯತಕ್ಕೆ ಆದಾಯ ಬರುವಂತೆ ಮಾಡಿದೆ. ಸುಮಾರು 50 ರಂಬೂಟನ್ ಗಿಡ, ಹಣ್ಣಿನ ಗಿಡಗಳು, ಪೌಷ್ಟಿಕ ಆಹಾರದ ತೋಟ, ಹೂವಿನ ತೋಟಗಳನ್ನು ನಿರ್ಮಾಣವನ್ನು ಮಾಡಿದೆ. ಪಂಚಾಯತು ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ಮೂಲನೆಗೆ ಆದ್ಯತೆ ನೀಡಿ, ಪಂಚಾಯತು ವತಿಯಿಂದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗಿದೆ.


ಪಂಚಾಯತದಲ್ಲಿ ಗ್ರಂಥಾಲಯವಿದ್ದು, ಗ್ರಾಮ ವ್ಯಾಪ್ತಿಯ ಜನರಿಗೆ ಹಾಗೂ ಮಕ್ಕಳಿಗೆ ಹೆಚ್ಚಿನ ಅನುಕೂಲ ಒದಗಿಸಿದೆ. ಪಂಚಾಯತು ವ್ಯಾಪ್ತಿಯಲ್ಲಿ ಅಂಚೆಕಚೇರಿ, ಆರೋಗ್ಯ ಉಪಕೇಂದ್ರ, ಅಂಗನವಾಡಿಗಳು, ನಾಲ್ಕು ಕಡೆಗಳಲ್ಲಿ ಪುಸ್ತಕ ಗೂಡು ಸಹ ಇದೆ. ಇದಲ್ಲದೆ ಗ್ರಾಮದಲ್ಲಿ ರಸ್ತೆ ಸೇರಿದಂತೆ ಆನೇಕ ಕಾಮಗಾರಿ ನಿರ್ವಹಿಸಲಾಗಿದೆ. ಉದ್ಯೋಗ ಖಾತರಿಯೋಜನೆನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಪಂಚಾಯತು ವತಿಯಿಂದ ನಡೆದ ಅಭಿವೃದ್ಧಿ ಕಾರ್ಯಗಳು, ಚುನಾಯಿತ ಆಡಳಿತ ಮಂಡಳಿಯ ಉತ್ತಮ ಆಡಳಿತ, ಪಿಡಿಒ ಮತ್ತು ಸಿಬ್ಬಂದಿಗಳ ಪ್ರಾಮಾಣಿಕ ಸೇವೆ ಮೊದಲಾದ ಅಂಶಗಳನ್ನು ಪರಿಗಣಿಸಿ ಈ ಬಳಂಜ ಗ್ರಾಮ ಪಂಚಾಯತು ಅರ್ಹವಾಗಿಯೇ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ 9 ಗ್ರಾಮ ಪಂಚಾಯತುಗಳು “ಗಾಂಧಿ ಪುರಸ್ಕಾರ”ಕ್ಕೆ ಆಯ್ಕೆಯಾಗಿದೆ. ಗಾಂಧಿ ಪುರಸ್ಕಾರಕ್ಕಾಗಿ ಗ್ರಾ.ಪಂ.ಗಳನ್ನು ಆಯ್ಕೆ ಮಾಡಲು ಗೂಗಲ್ ಫಾರ್ಮ್ ತಂತ್ರಾಂಶದ ಮೂಲಕ ವಿವಿಧ ಮಾನದಂಡಗಳನ್ನು ನಿಗದಿ ಪಡಿಸಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತುಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ತಂತ್ರಾಂಶದ ಮೂಲಕ ಉತ್ತರಿಸಿದ ವಿವರಗಳ ಆಧಾರದಲ್ಲಿ ತಾಲೂಕಿಗೆ ಅತೀ ಹೆಚ್ಚು ಅಂಕ ಗಳಿಸಿರುವ ಐದು ಗ್ರಾಮ ಪಂಚಾಯತುಗಳನ್ನು ಮೊದಲ ಸುತ್ತಿನಲ್ಲಿ ಆಯ್ಕೆ ಮಾಡಲಾಗಿತ್ತು. ಆಯ್ಕೆ ಮಾಡಿದ ಗ್ರಾಮ ಪಂಚಾಯತುಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯ ಸಮಿತಿಯು ಗ್ರಾ.ಪಂ.ಗಳಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಕ್ಷೇತ್ರ ವೀಕ್ಷಣೆ ನಡೆಸಿ ತಾಲೂಕಿಗೆ ಗ್ರಾಮ ಪಂಚಾಯತನ್ನು ಅಂತಿಮಗೊಳಿಸಿದೆ. ಬಳಿಕ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಶಸ್ತಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಶಿಫಾರಸು ಮಾಡಲಾಗಿತ್ತು. ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ ಮತ್ತು ಆವಿಷ್ಕಾರಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಗಾಂಧಿ ಪುರಸ್ಕಾರವನ್ನು ನೀಡಲಾಗುತ್ತಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!