September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ


ಮುಂಡಾಜೆ : ಮುಂಡಾಜೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಬೆಳ್ತಂಗಡಿ ತಾಲೂಕು ಮಟ್ಟದ ಖೋ- ಖೋ ಪಂದ್ಯಾಟದಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತದೆ.

ಇದೇ ಸಂದರ್ಭ ನಡ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ಪ್ರಾಂಶುಪಾಲರಾದ ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಅರ್ಥಶಾಸ್ತ್ರ ಉಪನ್ಯಾಸಕಿ ವಸಂತಿ ಪಿ. ಇವರ ನೇತೃತ್ವದಲ್ಲಿ ಈ ಸಾಧನೆ ಸಾಧ್ಯವಾಗಿದೆ.

ಅಕ್ಷಯ್ ‘ಬೆಸ್ಟ್ ಚೇಸರ್’, ಚರಣ್ ‘ಬೆಸ್ಟ್ ಆಲ್ ರೌಂಡರ್’, ಲಾವಣ್ಯ ‘ಬೆಸ್ಟ್ ರನ್ನರ್’ ಪ್ರಶಸ್ತಿಗಳನ್ನು ಪಡೆದಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya
error: Content is protected !!