32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಉಜಿರೆಯಲ್ಲಿ ಜುಲೈ ತಿಂಗಳಿನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಶ್ರೀಮತಿ ಉಷಾಕಿರಣ್ ಎಂ. ಕಾರಂತ್ ಇವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಎಸ್ ಡಿ ಎಂ ಶಿಕ್ಷಣ ಸಂಸ್ಥೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು ಆ ನಿಟ್ಟಿನಲ್ಲಿ ಉತ್ತಮ ವ್ಯವಸ್ಥೆಯನ್ನು ಸಂಸ್ಥೆಯಲ್ಲಿ ಕಲ್ಪಿಸಿರುತ್ತಾರೆ. ಇಲ್ಲಿ ಕಲಿತ ವಿದ್ಯಾರ್ಥಿನಿಯರ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್ ಡಿ ಎಂ ಪ್ರೌಢ ಶಾಲೆ ಬೆಳಾಲು ಇಲ್ಲಿನ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿ ಇವರು ಮಾತನಾಡಿ ಇಲ್ಲಿ ಕಲಿತ ವಿದ್ಯಾರ್ಥಿನಿಯರು ಸ್ವ ಉದ್ಯೋಗ ಮಾಡುವ ಮೂಲಕ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಅಲ್ಲಿ ಬೇಡಿಕೆಗಿಂತ ಗುಣಮಟ್ಟದ ಉತ್ಪಾದನೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಹೇಳಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಎಸ್ ಸತೀಶ್ಚಂದ್ರ ಇವರು ಮಾತನಾಡಿ ಒಂದು ವಾಹನ ತಯಾರಕ ಸಂಸ್ಥೆ ವಾಹನ ತಯಾರಿಕೆ ಮಾಡಿ ಮಾರಾಟ ಮಾಡಲು ಪರ್ಫಾರ್ಮೆನ್ಸ್ ಸರ್ಟಿಫಿಕೇಟ್ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಇಲ್ಲಿ ಕಲಿತ ವಿದ್ಯಾರ್ಥಿನಿಯರ ಪ್ರಮಾಣ ಪತ್ರ ಈ ಪ್ರಮಾಣ ಪತ್ರದ ಆಧಾರದ ಮೇಲೆ ನಿಮ್ಮ ಭವಿಷ್ಯ ಅಡಗಿದೆ ಅದೇ ರೀತಿ ಆ ಪ್ರಮಾಣ ಪತ್ರ ನೀವು ಮಾಡುವ ಕೆಲಸದಲ್ಲಿ ನಿಮ್ಮ ಪ್ರತಿಭೆಯನ್ನು ಗುರುತಿಸುತ್ತದೆ ಆದುದರಿಂದ ತುಂಬಾ ಉತ್ತಮ ರೀತಿಯಲ್ಲಿ ಕೆಲಸಗಳನ್ನು ಮಾಡಿ ಸಮಾಜದಲ್ಲಿ ಉತ್ತಮ ಹೆಸರು ಪಡೆಯಿರಿ ಎಂದು ಹೇಳಿ ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರು.

ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಸ್ವಾಗತಿಸಿದರು. ಕಿರಿಯ ತರಬೇತಿ ಅಧಿಕಾರಿಯಾಗಿರುವ ಶ್ರೀಮತಿ ಸಂಧ್ಯಾ ಇವರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ವಿತರಿಸಲಾಯಿತು. ಜೊತೆಗೆ 2022-23 ರಲ್ಲಿ ಕಂಪ್ಯೂಟರ್ ವೃತ್ತಿಯಲ್ಲಿ ಮತ್ತು ಸೀವೀಂಗ್ ಟೆಕ್ನಾಲಜಿ ವೃತ್ತಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸಲಾಯಿತು.

Related posts

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya
error: Content is protected !!