22.6 C
ಪುತ್ತೂರು, ಬೆಳ್ತಂಗಡಿ
May 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮವನ್ನು ನಡೆಸಲಾಯಿತು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಉದ್ಯೋಗವನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿರುವ 10 ಕುಟುಂಬವನ್ನು ಆಯ್ಕೆ ಮಾಡಿಕೊಂಡು ಪ್ರತಿಯೊಂದು ಕುಟುಂಬಕ್ಕೆ 25 ಮಲ್ಲಿಗೆ ಗಿಡವನ್ನು ಉಚಿತವಾಗಿ ನೀಡಿದರು.

ಮಲ್ಲಿಗೆ ಕೃಷಿಯಿಂದ ಹಲವಾರು ಮಂದಿ ಜೀವನ ನಡೆಸುತ್ತಿದ್ದು ಕಾರ್ಯಕ್ರಮದ ಸದುಪಯೋಗ ವನ್ನು ಪಡೆಯುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ನಾಟಿ ಮತ್ತು ನಿರ್ವಹಣೆ ಬಗ್ಗೆ ಕೃಷಿಕರಾದ ಲಿಂಗಪ್ಪಗೌಡ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿಯಾಳರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಸುಶಾಂತ್ ರವರು, ಜ್ಞಾನವಿಕಾಸ ಸಮನ್ವಯಧಿಕಾರಿಯಾದ ಮಧುರಾರವರು, ಸೇವಾಪ್ರತಿನಿಧಿ ಗೀತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

Related posts

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya
error: Content is protected !!