24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿನ ವಾಣಿಜ್ಯ ಸಂಘವನ್ನು ಮಂಗಳೂರಿನ ಎಂ. ಆರ್. ಪಿ. ಎಲ್. ಸಂಸ್ಥೆಯ ಆಂತರಿಕ ಲೆಕ್ಕಪರಿಶೋಧಕರಾದ ಸಿ.ಎ. ಸನತ್ ಕುಮಾರ್ ನಾಯಕ್ ಇವರು ಸೆ.30 ರಂದು ಉದ್ಘಾಟಿಸಿದರು.

ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ನಿಮ್ಮ ಪದವಿ ಶಿಕ್ಷಣದ ಜೊತೆಗೆ ವೃತ್ತಿಪರ ಹಾಗೂ ತಾಂತ್ರಿಕ ಪರಿಣಿತಿಯನ್ನು ಹೊಂದಿದಾಗ ಮಾತ್ರ ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ಉದ್ಯೋಗವನ್ನು ಪಡೆಯಲು ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಾಣಿಜ್ಯ ಸಂಘದ ಪದಾಧಿಕಾರಿಗಳನ್ನು ಸಿಎ ಸನತ್ ಕುಮಾರ್ ಇವರು ಪುಷ್ಪಗುಚ್ಛವನ್ನು ನೀಡಿ ಅಭಿನಂದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಇವರು ವಹಿಸಿ ವಿದ್ಯಾರ್ಥಿಗಳು ನಾಜೂಕು ಮತ್ತು ನೈಪುಣ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ. ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಗಳನ್ನು ಪ್ರಚುರಪಡಿಸಲು ಹಾಗೂ ವ್ಯಕ್ತಿತ್ವ ಬೆಳವಣಿಗೆಗೆ ವಾಣಿಜ್ಯ ಬಳಗವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು . ವಾಣಿಜ್ಯ ಸಂಘದ ಸಂಚಾಲಕರಾದ ಪ್ರೊಫೆಸರ್ ಪದ್ಮನಾಭ ಕೆ ಇವರು ವಾಣಿಜ್ಯ ಸಂಘದ ಪ್ರಾಮುಖ್ಯತೆ ತಿಳಿಸಿ ಅತಿಥಿಗಳನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪ್ರೊಫೆಸರ್ ಸುರೇಶ್ ವಿ ಇವರು ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಪ್ರೊಫೆಸರ್ ನವೀನ್ ಕುಮಾರ್ ಹಾಗೂ ಪ್ರೊಫೆಸರ್ ರಾಜೇಶ್ವರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಬಿಕಾಂನ ನಿವೇದಿತಾ ಮತ್ತು ತಂಡ ಪ್ರಾರ್ಥನೆ ಗೈದರು. ಪ್ರಥಮ ಬಿಕಾಂ ವಿದ್ಯಾರ್ಥಿನಿ ಕುಮಾರಿ ಶರಣ್ಯ ವಂದಿಸಿದರು. ತೃತೀಯ ಬಿಕಾಂನ ಅಪೇಕ್ಷ ಅತಿಥಿಗಳ ಪರಿಚಯ ನೀಡಿದರು. ಅಂತಿಮ ಬಿಕಾಂನ ಸಂಜನಾ ಮತ್ತು ದ್ವಿತೀಯ ಬಿಕಾಂನ ರಹೀನ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya
error: Content is protected !!