April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

ಬೆಳ್ತಂಗಡಿ: ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ 2022-23 ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ಸೆ.30 ರಂದು ನೋಡೆಲ್ ಅಧಿಕಾರಿ ದ.ಕ ಜಿಲ್ಲಾ ಪಂಚಾಯತದ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು.


ಸಭೆಯಲ್ಲಿ ಕಳೆದ ಮಾರ್ಚ್-2023ರವರೆಗಿನ ತಾಲೂಕು ಪಂಚಾಯತಿ ಬೆಳ್ತಂಗಡಿಯ ವಿವಿಧ ಯೋಜನೆಗಳ ಪ್ರಗತಿ ವರದಿ ಹಾಗೂ ತಾಲೂಕು ಪಂಚಾಯತಿಯ 15ನೇ ಹಣಕಾಸು ಯೋಜನೆಯ ಪ್ರಗತಿ ವರದಿ ಬಗ್ಗೆ ನೋಡೆಲ್ ಅಧಿಕಾರಿಯವರು ಪರಿಶೀಲನೆ ನಡೆಸಿದರು. ವಿವಿಧ ಯೋಜನೆಗಳಲ್ಲಿ ಶೇ 98.07 ಸಾಧನೆ ಹಾಗೂ 15ನೇ ಹಣಕಾಸು ಯೋಜನೆಯಲ್ಲಿ ಶೇ 97.14 ಪ್ರಗತಿ ಸಾಧಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.


ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ.ಕುಸುಮಾಧರ, ಸಹಾಯಕ ಕಾರ್ಯಪಾಲ ಅಭಿಯಂತರ ನಿತಿನ್ ಉಪಸ್ಥಿತರಿದ್ದರು.


ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ ಸ್ವಾಗತಿಸಿದರು. ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ., ಕಚೇರಿಯ ಅಶೋಕ ದೇವಾಡಿಗ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya
error: Content is protected !!