ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮವನ್ನು ನಡೆಸಲಾಯಿತು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಉದ್ಯೋಗವನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿರುವ 10 ಕುಟುಂಬವನ್ನು ಆಯ್ಕೆ ಮಾಡಿಕೊಂಡು ಪ್ರತಿಯೊಂದು ಕುಟುಂಬಕ್ಕೆ 25 ಮಲ್ಲಿಗೆ ಗಿಡವನ್ನು ಉಚಿತವಾಗಿ ನೀಡಿದರು.

ಮಲ್ಲಿಗೆ ಕೃಷಿಯಿಂದ ಹಲವಾರು ಮಂದಿ ಜೀವನ ನಡೆಸುತ್ತಿದ್ದು ಕಾರ್ಯಕ್ರಮದ ಸದುಪಯೋಗ ವನ್ನು ಪಡೆಯುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ನಾಟಿ ಮತ್ತು ನಿರ್ವಹಣೆ ಬಗ್ಗೆ ಕೃಷಿಕರಾದ ಲಿಂಗಪ್ಪಗೌಡ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿಯಾಳರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಸುಶಾಂತ್ ರವರು, ಜ್ಞಾನವಿಕಾಸ ಸಮನ್ವಯಧಿಕಾರಿಯಾದ ಮಧುರಾರವರು, ಸೇವಾಪ್ರತಿನಿಧಿ ಗೀತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

Related posts

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!