29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.

ಸರ್ವಧರ್ಮ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಳಿಕ ಗಾಂಧೀಜಿ ಹಾಗೂ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಗಾಂಧೀಜಿ ಅವರ ರಘುಪತಿ ರಾಘವ ರಾಜಾರಾಮ್ ಗೀತೆಯನ್ನು ಹಾಡಲಾಯಿತು. ಗಾಂಧೀಜಿ ಅವರ ಜೀವನ ಹಾಗೂ ತತ್ವ ಆದರ್ಶಗಳ ಬಗ್ಗೆ ಟಿ ಜಿ ಟಿ ಶಿಕ್ಷಕರಾದ ಸುರೇಶ್ ಅವರು ಮಾಹಿತಿ ನೀಡಿದರು. ಬಳಿಕ ಶಾಲಾವರಣವನ್ನು ಸ್ವಚ್ಛಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ದಾನಿಗಳು ಹಿರಿಯರಾದ ಗೋವಿಂದ ಭಟ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಶಾಲಾ ಮುಖ್ಯೋಪಾಧ್ಯಾಯರಾದ ಭಾಸ್ಕರ್, ಶಿಕ್ಷಕ ವೃಂದ, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!