September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ ಸಮಾರಂಭವು ಅ.2 ರಂದು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು.

ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ಶಿಗ್ಗಾವಿ ವಿಶ್ರಾಂತ ಉಪಕುಲಪತಿ ಡ. ಕೆ. ಚಿನ್ನಪ್ಪ ಗೌಡ ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಿದರು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮುಂಬಯಿ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಪಕ ಪ್ರೊ. ತಾಳ್ತಜೆ ವಸಂತ ಕುಮಾರ್, ಸಾಕ್ಷ್ಯಚಿತ್ರ ನಿರ್ದೇಶಕ ಡಾ. ಸುಂದರ ಕೇನಾಜೆ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಾಣಿ ಪ.ಪೂ ಕಾಲೇಜು ಪ್ರಾಂಶುಪಾಲ ಯದುಪತಿ ಗೌಡ, ಎಸ್‌ಡಿಎಂ ಕಾಲೇಜು ಸಹ ಪ್ರಾಧ್ಯಾಪಕ ಡಾ. ದಿವಾಕರ ಕೊಕ್ಕಡ, ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಅಧ್ಯಕ್ಷ ಡಾ. ವಿಶ್ವನಾಥ ಬದಿಕಾನ, ಸಾಕ್ಷ್ಯಚಿತ್ರ ನಿರ್ಮಾಪಕ ಭರತೇಶ ಅಲಸಂಡೆ ಮಜಲು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಸಂದೀಪ್ ಆರ್. ಅಧಿಕಾರ ಸ್ವೀಕಾರ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya
error: Content is protected !!