ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.
ಸರ್ವಧರ್ಮ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಳಿಕ ಗಾಂಧೀಜಿ ಹಾಗೂ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಗಾಂಧೀಜಿ ಅವರ ರಘುಪತಿ ರಾಘವ ರಾಜಾರಾಮ್ ಗೀತೆಯನ್ನು ಹಾಡಲಾಯಿತು. ಗಾಂಧೀಜಿ ಅವರ ಜೀವನ ಹಾಗೂ ತತ್ವ ಆದರ್ಶಗಳ ಬಗ್ಗೆ ಟಿ ಜಿ ಟಿ ಶಿಕ್ಷಕರಾದ ಸುರೇಶ್ ಅವರು ಮಾಹಿತಿ ನೀಡಿದರು. ಬಳಿಕ ಶಾಲಾವರಣವನ್ನು ಸ್ವಚ್ಛಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ದಾನಿಗಳು ಹಿರಿಯರಾದ ಗೋವಿಂದ ಭಟ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಶಾಲಾ ಮುಖ್ಯೋಪಾಧ್ಯಾಯರಾದ ಭಾಸ್ಕರ್, ಶಿಕ್ಷಕ ವೃಂದ, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.