ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ , ಬೆಳ್ತಂಗಡಿ ಬಂಟ್ವಾಳ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ , ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ ಹಾಗೂ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಸಹಯೋಗದೊಂದಿಗೆ ಗಾಂಧಿಜಯಂತಿಯ ಸಂಭ್ರಮಾಚರಣೆಯ ಪ್ರಯುಕ್ತ ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶವು ಅ.2 ರಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್ ಉದ್ಘಾಟಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದರು.
ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಹೋಲಿ ರೆಡಿಮರ್ ಚರ್ಚಿನ ಪ್ರಧಾನ ಧರ್ಮಗುರು ವಂ. ಸ್ವಾ. ಮೊಲ್ಟರ್ ಒಸ್ವಲ್ಡ್ ಡಿ ಮೆಲ್ಲೊ ಹಾಗೂ ಹೊಸನಗರ ಜುಮ್ಮಾ ಮಸೀದಿ ಪ್ರಧಾನ ಧರ್ಮಗುರು ಮೌಲಾನ ಅಶ್ರಫ್ ಹಿಮಾಮಿ ರವರು ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ ಜಿಲ್ಲೆ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಮುಂಬೈ ಉದ್ಯಮಿ ಆರ್.ಬಿ ಹೆಬ್ಬಳ್ಳಿ , ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಸ್ಥಾಪಕಧ್ಯಾಕ್ಷರು ಕೆ.ವಸಂತ ಸಾಲ್ಯಾನ್, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜಾ , ನಿರ್ದೇಶಕ ಮಹಾಬಲ ಕುಲಾಲ್, ಬೆಳ್ತಂಗಡಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ ಆರ್. ಗುರುವಾಯನಕೆರೆ ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ಬಂಟ್ವಾಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ ಭಾಗವಹಿಸಿದರು.
ಉಡುಪಿ ನ್ಯಾಯವಾದಿ ಸಹನಾ ಕುಂದರ್ ರವರಿಂದ ವ್ಯಸನಮುಕ್ತ ಕುಟುಂಬ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನೀಡಿದರು.
ಕಾರ್ಯಕ್ರಮದಲ್ಲಿ ಸಾಧಕರಾದ ಧರ್ಮಸ್ಥಳ ಎಸ್.ಕೆ.ಡಿಆರ್.ಡಿಪಿ ಟ್ರಸ್ಟ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಎಲ್ ಹೆಚ್ ಮಂಜುನಾಥ, ಲಿಂಗಪ್ಪ ಗೌಡ, ಅಚ್ಚುತ ಆಚಾರ್ಯ, ವಿಶ್ವನಾಥ ಬಸವನಗುಡಿ, ಸುಂದರ , ಬಿರ್ಮಣ ಪೂಜಾರಿ, ಕುಂಜ್ಙ ಗೌಡ, ಸಂಜೀವ ಗೌಡ ಹಾಗೂ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸಾಧಕರಾದ ಹರೀಶ್ ಕೂಡಿಗೆ, ಸತೀಶ್ ಆಚಾರ್ಯ, ಸ್ನೇಕ್ ಪ್ರಕಾಶ್, ನಾಗೇಶ್, ಜೀವ ರಕ್ಷಕ ತರಬೇತುದಾರ ಸಂತೋಷ್ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ , ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಪೂಜಾರಿ, ಬಂಟ್ವಾಳ ಯೋಜನಾಧಿಕಾರಿ ಮಾಧವ ಗೌಡ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಎಸ್.ಡಿ.ಎಂ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ ಸ್ವಾಗತಿಸಿದರು . ರಾಮ್ ಕುಮಾರ್ ಕಾಯ೯ಕ್ರಮ ನಿರೂಪಿಸಿದರು. ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಧನ್ಯವಾದವಿತ್ತರು.