37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

ಇಂದಬೆಟ್ಟು: ಮಹಾತ್ಮ ಗಾಂಧೀಜಿ ಯವರ ಜನ್ಮದಿನಾಚರಣೆ ಅಂಗವಾಗಿ ಭಾರತ ಸರಕಾರದ ನಿರ್ದೇಶನದಂತೆ ಸ್ವಚ್ಚತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ ಎಂಬ ಕಾರ್ಯಕ್ರಮವು ಅ.1 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟುವಿನಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರ ನೇತೃತ್ವದಲ್ಲಿ ಇಂದಬೆಟ್ಟು ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು ಸಿಬ್ಬಂದಿ ವರ್ಗದವರು, ಗ್ರಾಮದ ಯುವ ಸಂಘಟನೆ ನವಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಇಂದಬೆಟ್ಟು ಸಂಜೀವಿನಿ ಒಕ್ಕೂಟ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಇಂದಬೆಟ್ಟು ಸುಧರ್ಮ ಆಟೋ ರಿಕ್ಷಾ ಚಾಲಕ ಮಾಲಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ನೋಡೆಲ್ ಅಧಿಕಾರಿ ಶ್ರೀಮತಿ ತಾರಕೇಶ್ವರಿ ಯವರು, ಸಿ ಆರ್.ಟಿ ತಾಲೂಕು ಸಂಯೋಜಕ ವಿನೋದ್ ಪ್ರಸಾದ್ ಉಪಸ್ಥಿತರಿದ್ದರು. . ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ಸ್ವಾಗತಿಸಿ ಪ್ರತಿಜ್ಞೆ ಭೋದಿಸಿದರು, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ವಂದಿಸಿದರು.

Related posts

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!