23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2022-23ನೇ ಸಾಲಿನ ಪ್ರತಿಷ್ಠಿತ `ಗಾಂಧಿ ಗ್ರಾಮ ಪುರಸ್ಕಾರ’ ಪ್ರಶಸ್ತಿ ಅರ್ಹವಾಗಿ ಬಳಂಜ ಗ್ರಾಮ‌ ಪಂಚಾಯತ್ ಗೆ ಒಲಿದು ಬಂದಿದೆ.

ಅ.2 ಗಾಂಧಿ ಜಯಂತಿಯಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆರವರಿಂದ ಬಳಂಜ ಗ್ರಾಮ ಪಂಚಾಯತ್ ದ ಅಧ್ಯಕ್ಷೆ ಶೋಭಾ ಕುಲಾಲ್, ಪಂ.ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್,ಮಾಜಿ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷ ಯಶೋಧರ ಶೆಟ್ಟಿ ಹಾಗೂ ಸದಸ್ಯರು ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಪುರಸ್ಕಾರದಲ್ಲಿ ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಮತ್ತು ರೂ.5 ಲಕ್ಷಗಳ ನಗದು ಬಹುಮಾನವನ್ನು ಒಳಗೊಂಡಿರುತ್ತದೆ.

Related posts

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಭಗವತಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆ ಆರಂಭ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya
error: Content is protected !!