24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆ ಮತ್ತು ಮೌನ ಪ್ರಾರ್ಥನೆಯನ್ನು ಮಾಡಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಪುಷ್ಪನಮನ ಸಲ್ಲಿಸಿದರು. 



ಸ್ವಚ್ಛತಾ ಆಂದೋಲನದಲ್ಲಿ ಶಾಲೆಯ ಪರಿಸರದ ಸ್ವಚ್ಚತೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಸ್ಕೌಟ್ ಗೈಡ್ಸ್ ಕಬ್ ಬುಲ್ ಬುಲ್ ಸ್ವಚ್ಛತಾ ಜಾಥದೊಂದಿಗೆ ಬೆಳ್ತಂಗಡಿಯ ನಗರಗಳಲ್ಲಿ ಘೋಷಣೆಗಳೊಂದಿಗೆ ಸಾಗಿದರು.


ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಸ್ಕೌಟ್ ಮಾಸ್ಟರ್ ಮಂಜುನಾಥ್ ರವರು ಸಹಕರಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಯೋಜಕ ಶಿಕ್ಷಕಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಧಳೀಯ ಸಂಸ್ಥೆ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Related posts

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya
error: Content is protected !!