ಬೆಳ್ತಂಗಡಿ : ತಾಲೂಕು ಸಮಿತಿ ಬಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಅ.03ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿಯನ್ನು ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಭಾರತೀಯ ಮಜ್ದೂರ್ ಸಂಘದ ಜಯರಾಜ್ ಸಾಲಿಯಾನ್ 2021-22ನೇ ಸಾಲಿನಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಬಂದಿರುವುದಿಲ್ಲ, ನೂತನವಾಗಿ ಆಯ್ಕೆಯಾದ ಕರ್ನಾಟಕ ಸರ್ಕಾರದ ಕಾರ್ಮಿಕ ಮಂತ್ರಿ ಸಂತೋಷ್ ಲಾಡ್ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದರೆ, ವೃದ್ಧಾಪ್ಯಾ ಪಿಂಚಣಿ ಹಾಗೂ ಸ್ಕಾಲರ್ ಶಿಪ್ ನಲ್ಲಿ ಭಾರಿ ಪ್ರಮಾಣದ ಕಡಿತ ಮಾಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ ಎಂದರು.
ಈ ಸಂದರ್ಭದಲ್ಲಿ ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್, ಗಣೇಶ್, ಉದಯ್ ಕುಮಾರ್ ವಕೀಲರು, ಸಂತಪ್ಪ, ಪದಾಧಿಕಾರಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.