ಬೆಳ್ತಂಗಡಿ : ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಸಂತಿ ಕಡ್ಡಿಬಾಗಿಲು, ನೆರಿಯ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಹಾಲಿ ಸದಸ್ಯೆ ಹಾಗೂ ಬೂತ್ ಸಮಿತಿ ಅಧ್ಯಕ್ಷೆ ಶ್ರೀಮತಿ ಕುಶಾಲ ಕಡ್ಡಿಬಾಗಿಲು, ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷ, ಗ್ರಾ.ಪಂ ಸದಸ್ಯ ಸಚಿನ್ ಅಣಿಯೂರು ಕುಲೆನಾಡಿ ಇವರನ್ನು ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

previous post
next post