March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಯೋಗೋತ್ಸವವು ಹೆಚ್.ಡಿ ಕೋಟೆ ತಾಲೂಕಿನಾದ್ಯಾಂತ ಏಕಕಾಲದಲ್ಲಿ ಅನುಭವಿ ಯೋಗ ಶಿಕ್ಷಕರಿಂದ 80 ಕೇಂದ್ರಗಳಲ್ಲಿ 41ನೇ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರ ವಿದ್ಯಾರ್ಥಿಗಳಿಗಾಗಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನಾ ಸಮಾರಂಭವು ಅ.11 ರಂದು ಗುರುಭವನ ಹೆಚ್.ಡಿ ಕೋಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸರಗೂರು ಶ್ರೀ ಮಹದೇವಸ್ವಾಮಿ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಹೆಚ್ ಕೋಟೆ ತಹಶೀಲ್ದಾರರು ಸಣ್ಣರಾಮಪ್ಪ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧ.ಗ್ರಾ.ಯೋ.ಪ್ರಾದೇಶಿಕ ನಿರ್ದೇಶಕ ಬಿ ಜಯರಾಮ ನೆಲ್ಲಿತ್ತಾಯ, ಹೆಚ್.ಡಿ ಕೋಟೆ ತಾಲೂಕು ಆರೋಗ್ಯಧಿಕಾರಿ ಟಿ ರವಿಕುಮಾರ್, ಹೆಚ್.ಡಿ ಕೋಟೆ ಆರಕ್ಷಕ ನಿರೀಕ್ಷಕ ಶಬ್ಬೀರ್ ಹುಸೇನ್, ಹೆಚ್.ಡಿ ಕೋಟೆ ಕ್ಷೇತ್ರ ಶಿಕ್ಷಣಧಿಕಾರಿ ಮಾರಯ್ಯ,ಹೆಚ್.ಡಿ ಕೋಟೆ ವಕೀಲರು ಎ.ಸಿ ರವಿ ಕುಮಾರ್ ಭಾಗವಹಿಸಲಿದ್ದಾರೆ.

Related posts

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!