25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಅ.08 ರಿಂದ 14 ರ ವರೆಗೆ ನಡೆಯಲಿದೆ.

ಅ.08 ರ ಮಧ್ಯಾಹ್ನ 2.30 ಘಂಟೆಗೆ ಪಡ್ಯಾರಬೆಟ್ಟದ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಧರ್ಮದರ್ಶಿ ಜೀವಂಧರ ಕುಮಾರ್ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು , ನಿವೃತ್ತ ಪ್ರಾಚಾರ್ಯ ಪ್ರೊ. ದಿನೇಶ್ ಚೌಟ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿಯವರು ಶುಭಾಶಂಸನೆ ಮಾಡಲಿದ್ದಾರೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಶ್ರೀನಾಥ್ ಅವರು ಸ್ವಚ್ಛ ಪರಿಸರದ ಕರಪತ್ರವನ್ನು ಬಿಡುಗಡೆ ಮಾಡಲಿದ್ದಾರೆ.

ಅ. 14 ರಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್ . ಸತೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು , ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅತಿಥಿಗಳಾಗಿ ಆಗಮಿಸಲಿದ್ದಾರೆ.

ವಾರಗಳ ಕಾಲ ಶ್ರಮದಾನ, ಗ್ರಾಮ ಸಮೀಕ್ಷೆ , ಶೈಕ್ಷಣಿಕ ಕಾರ್ಯಕ್ರಮ , ಸಾಂಸ್ಕೃತಿಕ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಶಿಬಿರ ಸಮಿತಿಯ ಅಧ್ಯಕ್ಷ ವಿಕಾಸ್ ಜೈನ್ , ಪೆರಿಂಜೆ ಹಾಗೂ ಉಜಿರೆಯ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya
error: Content is protected !!