September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅ.2 ರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದಿಂದ ವ್ಯಾಪಾರ ಮಳಿಗೆಗಳಿಗೆ ಹಾಗೂ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಲಾಯಿತು.

ಕೆಲವು ವ್ಯಾಪಾರ ಕೇಂದ್ರಗಳಿಂದ ಪ್ಲಾಸ್ಟಿಕ್ ಅನ್ನು ವಶಪಡಿಸಲಾಯಿತು. ಸರಕಾರದ ಆದೇಶದಂತೆ NO GSR571(E) ರಂತೆ ಪ್ಲಾಸ್ಟಿಕ್ ನಿಷೇಧ ಹಾಗೂ ದಂಡನೆ ನಿಯಮದಂತೆ ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಏಕ ಬಳಕೆಯ ಪ್ಲಾಸ್ಟಿಕ್ ಅಂದರೆ 100 ಮೈಕ್ರೋನಿಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್, ಪಿಯುಸಿ ಬ್ಯಾನರ್ ಗಳು,ಪ್ಲಾಸ್ಟಿಕ್ ಸ್ಟಿಕರ್ ಗಳು, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಲೋಟಗಳು, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್ ಗಳು,ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್ ಗಳು, ಅಲಂಕಾರಿಕಾಗಿ ಬಳಸುವ ಪಾಲಿಸ್ಟೇರಿಯನ್ ಥರ್ಮಕೋಲ್, ಬಲೂನ್ ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್ ಗಳು,ಇವುಗಳ ದಾಸ್ತಾನು ಮಾರಾಟ ಮತ್ತು ಬಳಕೆಯನ್ನು ನಿಷೇಧ ಮಾಡುವಂತೆ ಸೂಚನೆ ನೀಡಲಾಯಿತು.

Related posts

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya
error: Content is protected !!