24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

ಬೆಳ್ತಂಗಡಿ: ದ.ಕ.ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಅ. 18 ರಂದು ಬೆಳಿಗ್ಗೆ 10:30 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಎ.ಐ.ಸಿ.ಸಿ. ವರ್ಕಿಂಗ್ ಕಮಿಟಿಯ ಸದಸ್ಯರಾಗಿ ನೇಮಕಗೊಂಡ ರಾಜ್ಯಸಭಾ ಸದಸ್ಯರೂ ಆಗಿರುವ ಡಾ. ನಾಸಿರ್ ಹುಸೈನ್ ರವರಿಗೆ ಮತ್ತು ಕೆ.ಪಿ.ಸಿ.ಸಿ. ಕಾರ್ಯಾದ್ಯಕ್ಷ, ಕರ್ನಾಟಕ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ನಡೆಯಲಿದೆ.


ಈ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರೂ, ವಿಧಾನ ಪರಿಷತ್ ನ ಶಾಸಕ ಅಬ್ದುಲ್ ಜಬ್ಬಾರ್, ಸಚಿವರಾದ ರಹೀಮ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಐವನ್ ಡಿಸೋಜರವರನ್ನು ಆಹ್ವಾನಿಸಿದರು.


ಈ ನಿಯೋಗದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್, ಕೋಶಾಧಿಕಾರಿಯಾದ ಮಹಮ್ಮದ್ ಬಪ್ಪಳಿಗೆ,ಕಡಬ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಶೇಡಿಗುಂಡಿ,ಬಂಟ್ಟಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ರಾಜ್ಯ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾದ ಹಬೀಬುಲ್ಲ ಕನ್ನೂರು, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷರಾದ ಹಸನಬ್ಬ ಚಾರ್ಮಾಡಿ, ದ.ಕ ಜಿಲ್ಲಾ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾದ ಶಬೀರ್ ಸಿದ್ದಕಟ್ಟೆ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಸಾಮಾಜಿಕ ಕಾರ್ಯಕರ್ತರಾದ ಇಲ್ಯಾಸ್ ಕಕ್ಕಿಂಜೆ, ಉದ್ಯಮಿಗಳಾದ ಉಸ್ಮಾನ್ ಕೊಳ್ಳೆಜಾಲ್ ಹಾಜರಿದ್ದರು.

Related posts

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya
error: Content is protected !!