38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

ವೇಣೂರು: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘ (ರಿ.) ಬೆಳ್ತಂಗಡಿ ಇದರ ಜಂಟಿ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಅ.10ರಂದು ವೇಣೂರು ಕರಿಮಣೇಲು ಶ್ರೀಮತಿ ಸೀತಾ ತೌಡ ಭಂಡಾರಿಯವರ ಗದ್ದೆಯಲ್ಲಿ ಜರುಗಲಿರುವುದು. ಸಂಘದ ಗೌರಾವಾಧ್ಯಕ್ಷ ಎ. ಪೂವಪ್ಪ ಭಂಡಾರಿ ಪಣೆಜಾಲು ದೀಪ ಪ್ರಜ್ವಲನೆ ನಡೆಸಲಿರುವರು.


ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ ಭಂಡಾರಿ ಉಜಿರೆ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಕಿಶೋರ ಕುಮಾರ್ ಬೊಟ್ಯಾಡಿ ಪುತ್ತೂರು, ಶ್ರೀಮತಿ ಸೀತಾ ತೌಡ ಭಂಡಾರಿ ಕರಿಮಣೇಲು ಭಾಗವಹಿಸಲಿದ್ದಾರೆ. ಉದ್ಯಮಿ ಭಾಸ್ಕರ ಪೈ, ಪ್ರಗತಿಪರ ಕೃಷಿಕ ಬಾಲಕೃಷ್ಣ ಭಟ್ ದಡ್ಡು, ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗುರುದಾಸ ಭಂಡಾರಿ, ಪುತ್ತೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗಿರೀಶ್ ಭಂಡಾರಿ, ಬೆಳ್ತಂಗಡಿ ಸವಿತಾ ಸಮಾಜ ಅಧ್ಯಕ್ಷ ಗೋಪಾಲ ಭಂಡಾರಿ, ಮಂಗಳೂರು ಯುವ ವೇದಿಕೆ ಅಧ್ಯಕ್ಷ ನಿತ್ಯಾನಂದ ತಲಪಾಡಿ, ವೇಣೂರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಸುಧೀರ್ ಭಂಡಾರಿ, ಯುವ ವೇದಿಕೆ ಕಾರ್ಯದರ್ಶಿ ಪ್ರಶಾಂತ್ ಭಂಡಾರಿ ಅಂಡಿಂಜೆ, ರಮ್ಯ ಪ್ರವೀಣ್ ಭಂಡಾರಿ ಗೌರವ ಉಪಸ್ಥಿತರಿರುವರು.

ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಯಸ್ಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದು.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‌ನ ಬೆಂಗಳೂರು ಆಡಳಿತ ಮೊಕ್ತೇಸರ ಲಕ್ಷ್ಮಣ ಕರಾವಳಿ, ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಾರ್ಕಳ, ಶಾಸಕ ಹರೀಶ್ ಪೂಂಜ, ಉದ್ಯಮಿ ಸದಾಶಿವ ಭಂಡಾರಿ ಸಕಲೇಶಪುರ ಮೊದಲಾದವರು ಉಪಸ್ಥಿತರಿರುವರು.

Related posts

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya
error: Content is protected !!