ಉಜಿರೆ:ಪರಮಪೂಜ್ಯ ಡಾ| ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ,ಮಾತೃಶ್ರೀ ಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, (ರಿ) ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆಯನ್ನು ಅ. 8 ರಂದು ಬೆಳ್ತಂಗಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ-ಬಿ ಬೆಳಾಲಿನಲ್ಲಿ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಎಮ್.ಸಿ ಅಧ್ಯಕ್ಷರು ಸಂತೋಷ್ ಮಾಡಿವಾಳ, ಉದ್ಘಾಟಕರಾಗಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ವಿಧ್ಯಾ ಶ್ರೀನಿವಾಸ ಗೌಡ, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್, ರೋಟರಿ ಕ್ಲಬ್ ಅಧ್ಯಕ್ಷರು ಅನಂತ ಭಟ್ ಮಚ್ಚಿಮಲೆ , ಬೆಳಾಲು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸತೀಶ್ ಗೌಡ ಎಳ್ಳುಗದ್ದೆ, ಪೆರಿಯಡ್ಕ ಚಿತ್ತಾರ ಯುವಶಕ್ತಿ ಗೆಳೆಯರ ಬಳಗದ ಅಧ್ಯಕ್ಷರಾದ ಶ್ರೀಯುತ ರಾಜೇಶ್ , ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿಜಯ, ಜ್ಞಾನ ದೀಪ ಶಿಕ್ಷಕಿ ಭವ್ಯಶ್ರೀ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಸಹಶಿಕ್ಷಕಿ ಶ್ರೀಮತಿ ಜಯಶ್ರೀ.ಬಿ.ಕೆ ಯವರು ನಿರೂಪಣೆ ಮಾಡಿ ಧನ್ಯವಾದ ಮಂಡಿಸಿದರು.
ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸದಸ್ಯರಿಂದ ಶಾಲೆಯ ಕಟ್ಟಡವನ್ನು ಸ್ವಚ್ಚಗೊಳಿಸಿ ಸುಣ್ಣ ಬಣ್ಣ ಹೊಡೆಯುವ ಕೆಲಸವನ್ನು ಆರಂಭಿಸಲಾಯಿತು. ನವೆಂಬರ್ ತಿಂಗಳಲ್ಲಿ ಶಾಲೆಯನ್ನು ಸಂಪೂರ್ಣ ಅಭಿವೃದ್ಧಿಪಡಿಸಿ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಲಿದೆ.