38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ದೇವಣ್ಣ ಗೌಡರ ಪುತ್ರ ಲೋಲಾಕ್ಷ ಎಂಬವರು ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ ಪಂಚಾಂಗವನ್ನು ಅರಣ್ಯಾಧಿಕಾರಿಗಳು ಕಿತ್ತೆಸೆದುದನ್ನು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ಮರು ನಿರ್ಮಿಸಿದ ಘಟನೆಯ ಬೆನ್ನಲ್ಲೆ ಅ.9ರಂದು ಅರಣ್ಯ ಇಲಾಖೆಯವರು ಮನೆ ತೆರವಿಗೆ ಸಚಿವರ ಆದೇಶ ಇದೆ ಎಂದು ಹೇಳಿ ಮತ್ತೆ ಮನೆ ತೆರವು ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆ ಜಿಲ್ಲೆಯ ಬಿಜೆಪಿ ಶಾಸಕರುಗಳು ಸ್ಥಳಕ್ಕೆ ಆಗಮಿಸಿ ವಿರೋಧ ವ್ಯಕ್ತಪಡಿಸಿದ್ದು, ನಾಗರಿಕರ ಪ್ರತಿಭಟನೆ ಹಿನ್ನಲೆಯಲ್ಲಿ ಮನೆಯನ್ನು ತೆರವುಗೊಳಿಸುವ ಅರಣ್ಯ ಇಲಾಖೆಯ ಪ್ರಯತ್ನ ವಿಫಲವಾಗಿದೆ. ಪ್ರಕರಣದ ನಡೆದ ಸ್ಥಳವನ್ನು ಸರ್ವೇ ಮಾಡಿ ಮುಂದಿನ ವರದಿ ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎನ್ನುವ ಆಗ್ರಹಕ್ಕೆ ಅರಣ್ಯ ಇಲಾಖೆ ಸಮ್ಮತಿಸಿದೆ.

ಈ ಸಂಧರ್ಭದಲ್ಲಿ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್ ಬಂಟ್ವಾಳ , ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಹಿರಿಯರಾದ ಕುಶಾಲಪ್ಪ ಗೌಡ ಪೂವಾಜೆ, ಅರುಣ್ ಕುಮಾರ್ ಪುತ್ತಿಲ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರಿಗೆ, ಪಕ್ಷದ ಪದಾಧಿಕಾರಿಗಳು, ಗ್ರಾ .ಪಂ ಅಧ್ಯಕ್ಷರು , ಸದಸ್ಯರು, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya
error: Content is protected !!