24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ‌ ಭಜನಾ ಸ್ಪರ್ದೆಗೆ ತರಭೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಡೂರಿನ ಆನಂದ ಆಚಾರ್ಯ (38ವರ್ಷ) ಎಂಬಾತನು ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ದೆಗೆ ಮಹಿಳೆಯರು, ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆತ್ತಿದ್ದರು, ಪ್ರವಾಸಿಗರು ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿ ಮಚ್ಚು ತೋರಿಸಿ, ಬೊಬ್ಬೆ ಹಾಕಿ ಬೆದರಿಕೆ ಹಾಕಿದ್ದು ಕೂಡಲೇ ಸ್ಥಳಿಯರು ವೇಣೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೋಲೀಸರು ಆಗಮಿಸಿ ಮಚ್ಙನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya
error: Content is protected !!