29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

ಉಜಿರೆ: 2023-24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ, 2021-22ನೇ ಸಾಲಿನಲ್ಲಿ ಉತ್ತಮ ಸಾಧನೆಗೈದು ಗಾಂಧಿ ಗ್ರಾಮ ಪುರಸ್ಕಾರ ಪಡೆದ ಗ್ರಾಮ ಪಂಚಾಯತ್ ಗಳು ಕರ್ನಾಟಕದ ಇನ್ನೊಂದು ಉತ್ತಮ ಸಾಧನೆಗೈದ ಗಾಂಧಿ ಗ್ರಾಮ ಪುರಸ್ಕೃತ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಲ್ಲಿನ ಉತ್ತಮ ಕಾರ್ಯಸಾಧನೆಗೆ ಅನುಸರಿಸಿದ ಕಾರ್ಯತಂತ್ರಗಳನ್ನು ಅಧ್ಯಯನ ಮಾಡಲು ಕರ್ನಾಟಕ ರಾಜ್ಯ ಸರಕಾರವು ಪರಸ್ಪರ ಕಲಿಕಾ ಕಾರ್ಯಕ್ರಮ ವನ್ನು ಅನುಷ್ಠಾನಗೊಳಿಸಿರುತ್ತದೆ. ಈ ಕಾರ್ಯಕ್ರಮದಡಿ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕೃತ ಉಜಿರೆ ಗ್ರಾಮ ಪಂಚಾಯತ್ ಬೀದರ್ ಜಿಲ್ಲೆ ಕನಕನಗರ ತಾಲೂಕು ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಗೆ ಕ್ಷೇತ್ರ ಭೇಟಿ ನೀಡಲು ಸರಕಾರ ಆದೇಶಿಸಿದ್ದು, ಅ.10, 11 ರಂದು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಧ್ಯಯನ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷರು ರವಿ ಕುಮಾರ್, ಸದಸ್ಯರು, ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್ , ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಕಾಶೀನಾಥ ಸಂಗಪ್ಪಾ ಜೀರಗೆ, ಉಪಾಧ್ಯಕ್ಷರು ದುರಾಣಿ ಶಮಾ ಬೇಗಂ ಅಬ್ದುಲ್ಲಾ ಮತ್ತು ಸದಸ್ಯರು, ಪಿಡಿಒ ಮನೋಹರ್, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya
error: Content is protected !!