25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿಯಲ್ಲಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು ದೀಕ್ಷಿತ್ ಪೂಜಾರಿ , ಸಂಪಾಜೆ ನಿವಾಸಿ ದೀಕ್ಷಿತ್ ಗೌಡ, ಜಾರ್ಲೋಟ್ಟು ನಿವಾಸಿ ಕಿರೋತ್ ಪೂಜಾರಿ, ಅಡೆಂಕಿಲೊಟ್ಟು‌ ನಿವಾಸಿ ಸುದರ್ಶನ್ ಗೌಡ ನಾಲ್ಕು ಜನ ಒಂದೇ ಊರಿನವರಾಗಿದ್ದು ಇವರೆಲ್ಲ ದೇವರ ಮನೆಗೆ ಕಾರಿನಲ್ಲಿ ಹೋಗಿದ್ದರು.ದೇವರಮನೆಗೆ ಪ್ರವಾಸಕ್ಕೆ ಬಂದಿದ್ದು ಪ್ರವಾಸ ಮುಗಿಸಿ ಹಿಂದಿರುಗುವಾಗ ಯುವಕರ ಮಧ್ಯದಲ್ಲಿ ಗಲಾಟೆ ನಡೆದು ಹೊಡೆದಾಟ ಮಾಡಿಕೊಂಡಿದ್ದರೆನ್ನಲಾಗಿದ್ದು ಕೋಪದಿಂದ ದೀಕ್ಷಿತ್ ಪೂಜಾರಿ ಬೇರೆಯಾಗಿ ಹೋಗಿದ್ದರು. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆಸಿದ್ದರು.ಇದೀಗ ಯುವಕ ಬೇರೆ ವಾಹನದ ಮೂಲಕ ಊರಿಗೆ ಮರಳಿ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮನೆಮಂದಿ ಮಾಹಿತಿ ನೀಡಿದ್ದಾರೆ. ಇನ್ನೂ ಪತ್ತೆಯಾಗಿರುವ ದೀಕ್ಷಿತ್ ಪೂಜಾರಿ ಬಣಕಲ್ ಠಾಣೆಗೆ ಹೋಗಿ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕಾಗಿದೆ.

Related posts

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya
error: Content is protected !!