27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

ಉಜಿರೆ: ಭಿತ್ತಿಪತ್ರಿಕೆಗಳಿಂದ ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ವಿಚಾರಗಳ ಕುರಿತು ಆಸಕ್ತಿ ಮೂಡಿಸುವ ಕೆಲಸ ಆಗಬೇಕು ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುನಿಲ್ ಹೆಗ್ಡೆ ಆಶಯ ವ್ಯಕ್ತಪಡಿಸಿದರು.
ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.11 ರಂದು ‘ವನಿತೆ’ ಭಿತ್ತಿಪತ್ರಿಕೆ ಅನಾವರಣಗೊಳಿಸಿ ಅವರು ಮಾತನಾಡಿದರು.


“ಭಿತ್ತಿಪತ್ರಿಕೆಯಲ್ಲಿರುವ ಮಾಹಿತಿ ನಮ್ಮ ಸ್ವಂತದ್ದಾಗಿದ್ದು, ಚಿಕ್ಕದಾಗಿ ಇರಬೇಕು. ನೋಡಿದ ಕೂಡಲೇ ಅದು ಏನನ್ನು ಸೂಚಿಸುತ್ತದೆ ಎಂಬುದನ್ನು ಹೇಳುವಂತಿರಬೇಕು” ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿಯರು ತಯಾರಿಸಿದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿದ ಅವರು, ಅವುಗಳ ಬಗ್ಗೆ ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಜನರಿಗೆ ಸ್ವೋದ್ಯೋಗಕ್ಕೆ ನೆರವಾಗುವ ಬಗ್ಗೆ ಸಲಹೆ ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಅವರು ಮಾತನಾಡಿ, “ಭಿತ್ತಿಪತ್ರಿಕೆಯ ಮೂಲಕ ಆರಂಭವಾದ ಈ ಬರವಣಿಗೆ ಮುಂದೆ ನಿಮ್ಮ ಪ್ರತಿಭೆಯನ್ನು ಸಮಾಜ ಗುರುತಿಸುವಂತೆ ಮಾಡಲಿ. ಇದರಿಂದ ಸಂಸ್ಥೆಗೆ ಶುಭವಾಗಲಿ” ಎಂದು ಹಾರೈಸಿದರು.


ಉತ್ತಮ ಭಿತ್ತಿಪತ್ರಿಕೆ ರಚಿಸಿದ ಎರಡು ತಂಡಗಳಿಗೆ ಪ್ರಥಮ, ದ್ವಿತೀಯ ಬಹುಮಾನ ವಿತರಿಸಲಾಯಿತು.
ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya
error: Content is protected !!