April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ನವೀನ್ ಬಿ.ಕೆ, ಉಪಾಧ್ಯಕ್ಷರಾಗಿ ಅಶೋಕ್ ಕರಿಯನೆಲ, ಜೊತೆ ಕಾರ್ಯದರ್ಶಿಯಾಗಿ ವಿನಯ ಕುಮಾರ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಪ್ರಶಾಂತ್ ಅವರು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ದಿನೇಶ್ ಶೆಟ್ಟಿ, ಧನಂಜಯ ಕುಮಾರ್, ಉಮೇಶ್, ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೀನಿಯರ್ ಕಮಿಟಿ ಚೇರ್ ಮನ್ ಆಗಿ ಅಲೋಶಿಯಸ್ ಲೋಬೋ ನೇಮಕರಾಗಿದ್ದು ಸದಸ್ಯರಾಗಿ ಶಶಿಕಿರಣ್ ಜೈನ್, ಸ್ವರ್ಣಲತಾರವರನ್ನು ವಕೀಲರ ಸಂಘದ ಪದಾಧಿಕಾರಿಗಳು ನೇಮಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ಕೇಶವ ಬೆಳಾಲ್ ಭಾಗವಹಿಸಿದ್ದರು ಹಾಗೂ ಉದಯ್ ಬಿಕೆ ಸಹಕರಿಸಿದರು.

Related posts

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya
error: Content is protected !!