ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಭಟ್ ಅವರ ಅಧ್ಯಕ್ಷತೆಯಲ್ಲಿ ‘ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ ಜರುಗಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಸುನಿಲ್ ಪಿ.ಜೆ ಅವರು ಜೀವ ಜಗತ್ತಿನ ಹಲವು ವಿಸ್ಮಯಗಳ ಬಗ್ಗೆ ದೃಶ್ಯಾವಳಿ ಮೂಲಕ ಮಾಹಿತಿ ನೀಡಿದರು.

ಸ್ಥಳೀಯ ಪಂಚಾಯತ್ ಇದರ ಗ್ರಂಥಪಾಲಕಿ ಸುಧಾ ಭರತ್, ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ಸ್ವಯಂ ಸೇವಕ ಯಶ್ವಿತ್ ಸ್ವಾಗತಿಸಿ , ಧನುಷ್ ವಂದಿಸಿದರು. ಪ್ರಾಪ್ತಿ ನಿರೂಪಿಸಿದರು.

Related posts

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!