April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

ಪೆರಿಂಜೆ : ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ದ.ಕ , ಉಡುಪಿ ಹಾಗೂ ಕೊಡಗು ಜಿಲ್ಲೆಯನ್ನೊಳಗೊಂಡ ರಾಷ್ಟ್ರೀಯ ಸೇವಾ ಯೋಜನೆಯ ಮಂಗಳೂರು ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಅವರು ಭೇಟಿ ನೀಡಿ ವಿದ್ಯಾರ್ಥಿ ಸ್ವಯಂ ಸೇವಕರನ್ನು ಉದ್ದೇಶಿಸಿ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಬಗ್ಗೆ , ಧ್ಯೇಯ ಉದ್ದೇಶಗಳ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಲ್ಲಿನ ಶ್ರೀ ಧ.ಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮುಕುಂದಚಂದ್ರ ಅವರು ಸನ್ಮಾನ ಮಾಡಿದರು.
ಘಟಕ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಅವರು ಅನುಭವದ ಅಭಿಪ್ರಾಯ ಮಂಡಿಸಿದರು.
ಸ್ವಯಂ ಸೇವಕಿ ಹರ್ಷಿತಾ ಪರಿಚಯಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು. ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ನಿರೂಪಿಸಿ ವಂದಿಸಿದರು.

Related posts

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya
error: Content is protected !!