32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

ಬೆಳ್ತಂಗಡಿ :ಬದಲಾದ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸೃಜನಶೀಲ ವ್ಯಕ್ತಿತ್ವವನ್ನು ರೂಪಿಸಿಕೊಂಡು ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ ಹೇಳಿದರು.

ಅವರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಓಡಿಲ್ನಾಳ ಇಲ್ಲಿ ಜರುಗಿದ ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಜಾಗೃತಿಯನ್ನು ಹೊಂದಿ ದೇಶದ ಬೆಳವಣಿಗೆಗೆ ಪೂರಕವಾದ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಗಾಂಧೀಜಿಯವರಂತಹ ಮಹಾನ್ ನಾಯಕರ ಆದರ್ಶಗಳನ್ನು ಪಾಲಿಸುತ್ತಾ, ಸ್ವಚ್ಛ ಪರಿಸರದ ನಿರ್ಮಾಣದಲ್ಲಿ ತೊಡಗಿಕೊಂಡು ಭವಿಷ್ಯದ ಭವ್ಯ ಭಾರತದ ರೂವಾರಿಗಳಾಗಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ .ಪಿ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಜಯಾನಂದ ಗೌಡ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಮಮತಾ.ಯಂ .ಶೆಟ್ಟಿ, ಒಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಿದಾನಂದ ಇಡ್ಯಾ, ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಕೋರಿಯಾರು, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀಮತಿ ಶಾಂತ .ಜಿ. ಬಂಗೇರಾ, ಓಡಿಲ್ನಾಳ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಶಮಿಮಾ ಪಾದೆ, ಶಾಲಾ ದೈಹಿಕ ನಿರ್ದೇಶಕರಾದ ನಿರಂಜನ್, ವಾಣಿ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್. ಬಿ ಉಪಸಿತರಿದ್ದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್.ಯಂ ಸ್ವಾಗತಿಸಿದರು. ಪ್ರಾಂಶುಪಾಲರಾದ ಡಿ. ಯದುಪತಿ ಗೌಡ ಪ್ರಸ್ತಾವನೆಗೈದರು. ಎನ್ಎಸ್ಎಸ್ ಸಹ ಕಾರ್ಯಕ್ರಮಾಧಿಕಾರಿ ಕು/ ಕಾಮಾಕ್ಷಿ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya
error: Content is protected !!