September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ


ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಇತ್ತೀಚೆಗೆ ಸಮಾಪ್ತಿಗೊಂಡಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸರಕಾರಿ ಪ್ರೌಢಶಾಲೆ ಬದನಾಜೆ ಇದರ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಸೀತಾರಾಮ್ ಇವರು ವಿದ್ಯಾರ್ಥಿಗಳು ಸೇವೆಯ ಮೂಲಕ ಮುಖ್ಯ ವಾಹಿನಿಗೆ ಬರುವ ಪ್ರಯತ್ನವನ್ನು ಮಾಡಬೇಕು ಸೇವೆಯೇ ಜೀವನದ ಮೂಲವಾಗಿರಬೇಕು ಸೇವೆ ಮಾಡುವ ಮೂಲಕ ನಮ್ಮ ಜೀವನಕ್ಕೆ ಸಾರ್ಥಕತೆಯನ್ನು ಕೊಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಹೇಳಿದರು.

ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಇದರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ ಕುಮಾರಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜನಾಜೆ ಇದರ ಎಸ್‌ಡಿಎಂಸಿ ಅಧ್ಯಕ್ಷ ಅನಿಲ್ ಡಿಸೋಜಾ, ಸರಕಾರಿ ಪ್ರೌಢಶಾಲೆ ಬದಾನಾಜೆ ಇದರ ಎಸ್‌ಡಿಎಂ ಸದಸ್ಯ ರಾಮಯ್ಯ ಗೌಡ ಮಾಚಾರು, ಆನಂದ ಗೌಡ , ಶ್ರೀಮತಿ ಭಾರತಿ , ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಮುನಾ ಸಮರೋಪ ಭಾಷಣವನ್ನು ಮಾಡಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಬಿಎ ಬಿಎ ಶಮಿಉಲ್ಲಾ ಶಿಬಿರದ ಸಮಗ್ರ ವರದಿಯನ್ನು ವಾಚಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕರಾದ ಕು. ಪ್ರತಿಕ್ಷ ,ಕು. ಜ್ಯೋತಿ, ಡುಂಡಿರಾಜ್ ವೀರೇಶ್ ಶಿಬಿರದ ಅನುಭವವನ್ನು ಹಂಚಿಕೊಂಡರು .ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಇವರು ಸ್ವಾಗತಿಸಿ ಶಿಬಿರಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಿದರು. ಸಹ ಶಿಬಿರಾಧಿಕಾರಿ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಬಿರಾಧಿಕಾರಿ ಕುಮಾರಿ ಬಬಿತ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಹರೀಶ್ ಕೆ. ಸಾಲ್ಯಾನ್ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!