24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳ 2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಮತ್ತು ಕೃಷಿ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವು ಅ.14 ರಂದು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಕೃಷಿ ಯಂತ್ರೋಪಕರಣಗಳ ವಿತರಣೆ ಮಾಡುವ ಮೂಲಕ ಚಾಲನೆ ನೀಡಿದರು.

2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ವಿದ್ಯುಕ್ತ ಚಾಲನೆಯನ್ನು ನೀಡಿದರು.

ವಾರ್ಷಿಕ ಸಸಿ ವಿತರಣಾ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು.

ಕೃಷಿ ಕಾರ್ಯಕ್ರಮಗಳ ವಾರ್ಷಿಕ ವರದಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮಗಳ ಮಾಹಿತಿ ಪತ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಮಲ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಟ್ರಸ್ಟಿ ಸಂಪತ್ ಸಾಮ್ರಾಜ್ಯ, ಜಂಟಿ ಕೃಷಿ ನಿರ್ದೇಶಕ ಡಾ. ಹೆಚ್ ಕೇಂಪೆಗೌಡ, ಶ್ರೀ ಕ್ಷೇತ್ರ. ಧ.ಗ್ರಾ. ಯೋಜನೆಯ ಮುಖ್ಯ ನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ, ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್ ಉಪಸ್ಥಿತರಿದ್ದರು.

ಬೆಳಾಲಿನ ಜಿನ್ನಮ್ಮ ಅವರಿಗೆ ಹಾಲು ಕರೆಯುವ ಯಂತ್ರ,ಹುಣ್ಸೆಕಟ್ಟೆಯ ವಿಶಾಲಾಕ್ಷಿ ಅವರಿಗೆ ಪವರ್ ಸ್ಪ್ರೇಯರ್,ಮೆಲಂತ ಬೆಟ್ಟು ಶ್ವೇತಾಗೆ ಕಳೆ ತೆಗೆಯುವ ಯಂತ್ರ,ನಾವೂರಿನ ಚಂದ್ರಹಾಸ್ ರಿಗೆ ನೀರಿನ ಪಂಪ್,ಹೊಸಂಗಡಿಯ ಲಕ್ಷ್ಮಿ ಅವರಿಗೆ ಗುಂಡಿ ತೆಗೆಯುವ ಯಂತ್ರ, ಗರ್ಡಾಡಿ ವಸಂತ ಪೂಜಾರಿಗೆ ಮರ ಹತ್ತುವ

ಯಂತ್ರ, ಕಾಯರ್ತಡ್ಕದ ರಮ್ಯಾ ಅವರಿಗೆ ಗೋಬರ್ ಗ್ಯಾಸ್,ಬೈಪಾಡಿಯ ಶೋಭಾ ಅವರಿಗೆ ಅಡಕೆ ಹಾಳೆ ಘಟಕ,ನಾರಾವಿ ಪ್ರಶಾಂತ್ ಅವರಿಗೆ ಯಂತ್ರಶ್ರೀ ನರ್ಸರಿ,ಮಳೆ ಬೆಟ್ಟು ಪ್ರವೀಣ್ ಅವರಿಗೆ ಮಿನಿ ಡೈರಿ ಘಟಕ,ವೇಣೂರಿನ ಅಣ್ಣಿ ಪೂಜಾರಿ,ನಾರವಿಯ ರವಿ ಎಂಕೆ,ಕಡಿ ರುದ್ಯಾವರಾದ ಹರಿಣಿ ಅವರಿಗೆ ಸಸಿ ವಿತರಣೆ ಮಾಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ| ಎಲ್.ಹೆಚ್ ಮಂಜುನಾಥ್‌ ಸ್ವಾಗತಿಸಿದರು. ಸುನೀಲ್ ಕಲ್ಕೊಪ್ಪ ಮತ್ತು ತಂಡದವರು ಪ್ರಾಥ೯ನೆ ಹಾಡಿದವರು. ಕೃಷಿ ಅಧಿಕಾರಿ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಯೋಜನಾಧಿಕಾರಿ ಸುರೇಂದ್ರ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!