ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಇತ್ತೀಚೆಗೆ ಸಮಾಪ್ತಿಗೊಂಡಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸರಕಾರಿ ಪ್ರೌಢಶಾಲೆ ಬದನಾಜೆ ಇದರ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಸೀತಾರಾಮ್ ಇವರು ವಿದ್ಯಾರ್ಥಿಗಳು ಸೇವೆಯ ಮೂಲಕ ಮುಖ್ಯ ವಾಹಿನಿಗೆ ಬರುವ ಪ್ರಯತ್ನವನ್ನು ಮಾಡಬೇಕು ಸೇವೆಯೇ ಜೀವನದ ಮೂಲವಾಗಿರಬೇಕು ಸೇವೆ ಮಾಡುವ ಮೂಲಕ ನಮ್ಮ ಜೀವನಕ್ಕೆ ಸಾರ್ಥಕತೆಯನ್ನು ಕೊಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಹೇಳಿದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಇದರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ ಕುಮಾರಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜನಾಜೆ ಇದರ ಎಸ್‌ಡಿಎಂಸಿ ಅಧ್ಯಕ್ಷ ಅನಿಲ್ ಡಿಸೋಜಾ, ಸರಕಾರಿ ಪ್ರೌಢಶಾಲೆ ಬದಾನಾಜೆ ಇದರ ಎಸ್‌ಡಿಎಂ ಸದಸ್ಯ ರಾಮಯ್ಯ ಗೌಡ ಮಾಚಾರು, ಆನಂದ ಗೌಡ , ಶ್ರೀಮತಿ ಭಾರತಿ , ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಮುನಾ ಸಮರೋಪ ಭಾಷಣವನ್ನು ಮಾಡಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಬಿಎ ಬಿಎ ಶಮಿಉಲ್ಲಾ ಶಿಬಿರದ ಸಮಗ್ರ ವರದಿಯನ್ನು ವಾಚಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕರಾದ ಕು. ಪ್ರತಿಕ್ಷ ,ಕು. ಜ್ಯೋತಿ, ಡುಂಡಿರಾಜ್ ವೀರೇಶ್ ಶಿಬಿರದ ಅನುಭವವನ್ನು ಹಂಚಿಕೊಂಡರು .ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಇವರು ಸ್ವಾಗತಿಸಿ ಶಿಬಿರಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಿದರು. ಸಹ ಶಿಬಿರಾಧಿಕಾರಿ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಬಿರಾಧಿಕಾರಿ ಕುಮಾರಿ ಬಬಿತ ಧನ್ಯವಾದವಿತ್ತರು.